News Karnataka Kannada
Monday, April 29 2024
ಬೆಂಗಳೂರು ನಗರ

ಹೈಕೋರ್ಟ್ ಗೆ ನೂತನ ನ್ಯಾಯಾಧೀಶ ನೇಮಕ

High Main Newsk 8946717138
Photo Credit :
ಬೆಂಗಳೂರು : ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶ ರಿತು ರಾಜು ಅವಸ್ಥಿ ಅವರನ್ನು ನೇಮಕ ಮಾಡಲಾಗಿದೆ.

ಒಟ್ಟು 13 ರಾಜ್ಯಗಳ ಹೈಕೋರ್ಟ್​ಗಳಿಗೆ ಮುಖ್ಯ ನ್ಯಾಯಾಧೀಶರನ್ನು ನೇಮಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದು, ಕೇಂದ್ರ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನಿನ್ನೆ ಅಧಿಸೂಚನೆ ಹೊರಡಿಸಿದ್ದಾರೆ. ಸುಪ್ರೀಂಕೋರ್ಟ್ ಶಿಫಾರಸಿನಂತೆ ಈ ಅಧಿಸೂಚನೆ ಹೊರಡಿಸಲಾಗಿದೆ.

ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ಅಲಹಾಬಾದ್ ಮೂಲದ ನ್ಯಾ.ರಿತು ರಾಜು ಅವಸ್ಥಿ ನೇಮಕವಾಗಿದೆ. ಇನ್ನು ಕರ್ನಾಟಕದ ನ್ಯಾ.ಅರವಿಂದ್ ಕುಮಾರ್ ಅವರನ್ನು  ಗುಜರಾತ್ ರಾಜ್ಯ ಹೈಕೋರ್ಟ್‌ನ  ಮುಖ್ಯ ನ್ಯಾಯಾಧೀಶರನ್ನಾಗಿ ನೇಮಿಸಲಾಗಿದೆ.

ಕರ್ನಾಟಕ ಸೇರಿದಂತೆ 8 ಹೈಕೋರ್ಟ್​ಗಳ ನ್ಯಾಯಮೂರ್ತಿಗಳ ನೇಮಕಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್​.ವಿ ರಮಣ  ಅವರ ನೇತೃತ್ವದ ಕೊಲಿಜಿಯಂ ಶಿಫಾರಸು ಮಾಡಿತ್ತು.

ಕರ್ನಾಟಕ ಹೈಕೋರ್ಟ್‌ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿಯಾಗಿರುವ ರಿತು ರಾಜ್‌ ಅವಸ್ತಿ ಅವರ ಹೆಸರನ್ನು ಸುಪ್ರೀಂಕೋರ್ಟ್‌ ಕೊಲಿಜಿಯಂ ಶಿಫಾರಸು ಮಾಡಿತ್ತು. ಇದರೊಂದಿಗೆ ದೇಶದ 13 ಹೈಕೋರ್ಟ್‌ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ಶಿಫಾರಸು ಮಾಡಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು