ಕೊರೋನಾ ಸೋಂಕಿನ ಹೊಸ ರೂಪಾಂತರ B.1.1.529 ಎಂಬ ಹೊಸ ಕೋವಿಡ್ ಪತ್ತೆಯಾಗಿದ್ದು, ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆಯಿಂದ ಸೂಚನೆ ನೀಡಲಾಗಿದೆ.
ಈಗಾಗಲೇ ಬೋಟ್ಸ್ವಾನಾದಲ್ಲಿ 3, ದಕ್ಷಿಣ ಆಫ್ರಿಕಾದಲ್ಲಿ 6, ಹಾಂಕಾಂಗ್ನಲ್ಲಿ 1 ಹೊಸ ತಳಿ ಪತ್ತೆಯಾಗಿವೆ. B.1.1529 ಹೊಸ ತಳಿಯಾಗಿದೆ. ಹೆಚ್ಚು ವೇಗವಾಗಿ ಹರಡಲಿದೆ ಎಂದು ತಜ್ಞರು ಹೇಳ್ತಿದ್ದಾರೆ.
ವ್ಯಾಕ್ಸಿನ್ ಪ್ರೊಟೆಕ್ಷನ್ ಮೀರಿಯೂ ಸೋಂಕು ತೀವ್ರಗೊಳಿಸುವ ಬಗ್ಗೆ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ, ಕೇಂದ್ರದಿಂದಲೂ ಅಲರ್ಟ್ ಬಂದ ಹಿನ್ನೆಲೆ ಆರೋಗ್ಯ ಇಲಾಖೆಯಿಂದ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಈ ಮೂರು ದೇಶಗಳಿಂದ ಬರುವವರಿಗೆ ಕಡ್ಡಾಯ ಟೆಸ್ಟ್ ಹಾಗೂ ಟ್ರ್ಯಾಕಿಂಗ್ ಮಾಡುವಂತೆ ಆದೇಶಿಸಲಾಗಿದೆ. ಈಗಾಗಲೇ ಈ ಮೂರು ದೇಶಗಳಿಂದ ಬಂದಿರುವವರನ್ನ ಪತ್ತೆ ಮಾಡಿ ಪರೀಕ್ಷೆ ಮಾಡುವಂತೆಯೂ ಸಹ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ವಿದೇಶಗಳಿಂದ ಬಂದವರಲ್ಲಿ ಪಾಸಿಟಿವ್ ಕಂಡು ಬಂದರೆ ಸ್ಯಾಂಪಲ್ಗಳನ್ನು ಸೀಕ್ವೆನ್ಸಿಂಗ್ ಮಾಡುವಂತೆ ಕೂಡ ಸಲಹೆ ನೀಡಲಾಗಿದೆ.