ಹೊಸ ವರ್ಷ ಆಚರಣೆಗೆ ಮಾರ್ಗಸೂಚಿ ಬಿಡುಗಡೆಗೊಳಿಸಿದ ರಾಜ್ಯ ಸರಕಾರ

ರಾಜ್ಯದಲ್ಲಿ ಕೊರೋನಾ ಹೊಸ ರೂಪಾಂತರ ಭೀತಿ ಹೆಚ್ಚುತ್ತಿದ್ದು, ಈ ನಡುವೆ ಹೊಸ ವರ್ಷ ಆಚರಣೆಗೆ ಸರ್ಕಾರ ಕಠಿಣ ನಿರ್ಬಂಧಗಳನ್ನು ವಿಧಿಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಸಭೆ ಮುಕ್ತಾಯದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ , ಬಹಿರಂಗವಾಗಿ ಹೊಸ ವರ್ಷ ಸಂಭ್ರಮಾಚರಣೆಗೆ ನಿರ್ಬಂಧ ವಿಧಿಸಿರುವುದಾಗಿ ತಿಳಿಸಿದರು.

ಹೊಸ ವರ್ಷ ಆಚರಣೆಯಲ್ಲಿ ಡಿಜೆಗೆ ಅವಕಾಶ ಇಲ್ಲ, ಅದೇ ರೀತಿ ಬೆಂಗಳೂರಿನ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಂತೆ ರಾಜ್ಯಾದ್ಯಂತ ಯಾವುದೇ ಹೊಸ ವರ್ಷದ ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ. ಬಾರ್ ಮತ್ತು ರೆಸ್ಟೋರೆಂಟ್​ನಲ್ಲಿ ಶೇ.50ರಷ್ಟು ಜನರಿಗೆ ಅವಕಾಶ ನೀಡಲಾಗಿದೆ. ಬಾರ್ ಅಂಡ್ ರೆಸ್ಟೋರೆಂಟ್ ಸಿಬ್ಬಂದಿಗೆ ಎರಡು ಲಸಿಕೆ ಕಡ್ಡಾಯವಾಗಿದೆ. ಈ ಮಾರ್ಗಸೂಚಿ ಡಿ.30 – ಜನವರಿ 2ರ ತನಕ ಅನ್ವಯವಾಗಲಿದೆ.

ಕ್ರಿಸ್ ಮಸ್ ಸಂದರ್ಭದಲ್ಲಿ ಕೊರೋನಾ ಮುಂಜಾಗ್ರತಾ ಕ್ರಮದೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಆಚರಿಸಬೇಕು. ಆ ಮೂಲಕ ಕ್ರಿಸ್ ಮಸ್ ಆಚರಿಸುವಂತೆ ಸಿಎಂ ಮನವಿ ಮಾಡಿದರು.

Sneha Gowda

Recent Posts

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

7 mins ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

18 mins ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

29 mins ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

39 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

51 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

1 hour ago