News Karnataka Kannada
Sunday, May 12 2024
ಬೆಂಗಳೂರು ನಗರ

₹22,900 ಕೋಟಿ ರೂ ವೆಚ್ಚದಲ್ಲಿ ಸೆಮಿಕಂಡಕ್ಟರ್‌ ಫ್ಯಾಬ್‌ ಪ್ಲ್ಯಾಂಟ್ ನಿರ್ಮಾಣ

Cm
Photo Credit : G Mohan

ಬೆಂಗಳೂರು: ₹22,900 (3 ಬಿಲಿಯನ್ ಡಾಲರ್) ಕೋಟಿ ರೂ ವೆಚ್ಚದಲ್ಲಿ ದೇಶದ ಮೊಟ್ಟ ಮೊದಲ ಸೆಮಿಕಂಡಕ್ಟರ್‌ ಫ್ಯಾಬ್‌ ಪ್ಲ್ಯಾಂಟ್ ನಿರ್ಮಾಣಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಕರ್ನಾಟಕ ಸರಕಾರ ಹಾಗೂ ಐಎಸ್‍ಎಂಸಿ ಅನಲಾಗ್ ಫ್ಯಾಬ್ ಪ್ರೈ.ಲಿ. ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಏಳು ವರ್ಷಗಳ ಅವಧಿಯಲ್ಲಿ ಒಟ್ಟು 1500 ಜನರಿಗೆ ಉದ್ಯೋಗ ಒದಗಿಸುವ ನಿರೀಕ್ಷೆ ಇದ್ದು, ಕರ್ನಾಟಕ ಸರಕಾರದ ಪರವಾಗಿ ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ ಹಾಗೂ ಐ.ಎಸ್.ಎಂ.ಇ. ಪರವಾಗಿ ನಿರ್ದೇಶಕ ಅಜಯ್ ಜಲನ್ ಸಹಿ ಹಾಕಿದರು.

ಸೆಮಿಕಂಡಕ್ಟರ್ ಘಟಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರಕಾರ ಮತ್ತು ಐ.ಎಸ್.ಎಂ.ಸಿ. ಅನಲಾಗ್ ಫ್ಯಾಬ್ ಪ್ರೈ.ಲಿ. ಸಂಸ್ಥೆ ಪರಸ್ಪರ ಮಾಡಿಕೊಂಡಿರುವ ಒಪ್ಪಂದವು ವಿಶ್ವದ ಸೆಮಿಕಂಡಕ್ಟರ್ ನಕ್ಷೆಯಲ್ಲಿ ಕರ್ನಾಟಕವನ್ನು ಗುರುತಿಸುವಂತೆ ಮಾಡಲಿದೆ. ವಿವಿಧ ರಾಜ್ಯಗಳು ಸೆಮಿಕಂಡಕ್ಟರ್ ಫ್ಯಾಬ್ ಹೂಡಿಕೆಗಳನ್ನು ಆಕರ್ಷಿಸಲು ಸ್ಪರ್ಧಿಸುತ್ತಿದ್ದ ವೇಳೆಯಲ್ಲಿಯೇ ಈ ಮಹತ್ವದ ಒಪ್ಪಂದಕ್ಕೆ ಕರ್ನಾಟಕ ಸರಕಾರ ಸಹಿ ಹಾಕಿದೆ. ಆರ್ಥಿಕ ಪ್ರೋತ್ಸಾಹಕಗಳೊಂದೇ ಅಲ್ಲದೇ, ಒಟ್ಟಾರೆ ಕಾರ್ಯನಿರ್ವಹಣೆಗೆ ಅಗತ್ಯವಿರುವ ವಾತಾವರಣವನ್ನು ನಿರ್ಮಿಸುವುದೂ ಮುಖ್ಯ ಎನ್ನುವುದನ್ನು ಕರ್ನಾಟಕ ಸರಕಾರ ಅರಿತಿದೆ. ದೇಶದಲ್ಲಿಯೇ ಅತ್ಯುತ್ತಮ ಮೂಲಭೂತ ಸೌಕರ್ಯ ಹಾಗೂ ಕೌಶಲಯುತ ಮಾನವ ಸಂಪನ್ಮೂಲವನ್ನು ಕರ್ನಾಟಕ ಹೊಂದಿದೆ ಎಂದು  ಹೇಳಿದರು.

ಈ ಒಪ್ಪಂದವು ಇಸ್ರೇಲ್ ಹಾಗೂ ಭಾರತದ ನಡುವೆ ತಂತ್ರಜ್ಞಾನ ಹಾಗೂ ಸಂಸ್ಕೃತಿಗಳ ವಿನಿಮಯಕ್ಕೂ ವೇದಿಕೆ ಕಲ್ಪಿಸಲಿದೆ ಎಂದು ಹೇಳಿದ ಅವರು ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಇದೊಂದು ಬಹುದೊಡ್ಡ ಹೆಜ್ಜೆ. ಸವಾಲುಗಳು ಸಹ ದೊಡ್ಡಮಟ್ಟದಲ್ಲಿ ಇವೆ. ಈ ಸವಾಲುಗಳನ್ನು ಮೆಟ್ಟಿಲುಗಳನ್ನಾಗಿ ಪರಿವರ್ತಿಸಿಕೊಳ್ಳಲೂ ಈ ಒಪ್ಪಂದ ಅವಕಾಶವನ್ನು ಕಲ್ಪಿಸಿದೆ ಎಂದು ತಿಳಿಸಿದ ಸಿಎಂ ಬಸವರಾಜ ಬೊಮ್ಮಾಯಿ, ನಮ್ಮ ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ಸರಕಾರದ ಸೆಮಿಕಂಡಕ್ಟರ್ ಮಿಷನ್ ಅನ್ನು ಅನುಮೋದಿಸಿರುವುದರಿಂದ ಸೆಮಿಕಂಡಕ್ಟರ್ ವಲಯದಲ್ಲಿ ಕರ್ನಾಟಕ ಮುಂದುವರೆಯಲು ಸಾಧ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಮತ್ತು ಐಟಿ, ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಐಟಿ ಬಿಟಿ ನಿರ್ದೇಶಕಿ ಮೀನಾ ನಾಗರಾಜ, ಕೈಗಾರಿಕೆ ಇಲಾಖೆ ಆಯುಕ್ತೆ ಗುಂಜನ ಕೃಷ್ಣಾ, ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ನಾವರ್ ಗಿಲೋನ್, ಐಎಸ್ಎಂಸಿ ಮುಖ್ಯಸ್ಥ ಇರೇಜ್ ಇಂಬರಮನ್ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು