News Karnataka Kannada
Sunday, May 05 2024
ಬೆಂಗಳೂರು ನಗರ

ಚುನಾವಣೆಗೆ ರಾಜ್ಯದಾದ್ಯಂತ 1.56 ಲಕ್ಷ ಪೊಲೀಸರ ನೇಮಕ

1.56 lakh police personnel to be deputed on election duty in K'taka
Photo Credit : By Author

ಬೆಂಗಳೂರು: ಚುನಾವಣಾ ಕರ್ತವ್ಯಕ್ಕೆ ಒಟ್ಟು 304 ಡಿವೈಎಸ್‍ಪಿಗಳು, 991 ಪಿ.ಐ.ಗಳು, 2,610 ಪಿಎಸ್‍ಐಗಳು, 5,803 ಎಎಸ್‍ಐಗಳು, 46,421 ಹೆಚ್‍ಸಿ, ಪಿಸಿಗಳು 27,990 ಹೋಮ್‍ ಗಾರ್ಡ್‍ಗಳು ಸೇರಿದಂತೆ ಒಟ್ಟು 84,119 ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜನೆಗೊಳಿಸಲಾಗಿದೆ.

ಅವಶ್ಯಕತೆಗನುಗುಣವಾಗಿ ಅಧಿಕಾರಿ, ಸಿಬ್ಬಂದಿಗಳ ಕೊರತೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಹೊರ ರಾಜ್ಯಗಳಿಂದ ಸುಮಾರು 8,500 ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಗೃಹ ರಕ್ಷಕರನ್ನು ಚುನಾವಣಾ ಕರ್ತವ್ಯಕ್ಕಾಗಿ ಪಡೆಯಲಾಗಿದೆ. 650 ಸಿಎಪಿಎಫ್ ಕಂಪನಿಗಳ ಜೊತೆಗೆ ರಾಜ್ಯ ಸಶಸ್ತ್ರ ಮೀಸಲು ಪಡೆಯನ್ನು ಸಹ ನಿಯೋಜಿಸಲಾಗಿದೆ. ಮತದಾನ ದಿನದಂದು ಮೇಲೆ ನಮೂದಿಸಿದ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಸೇರಿದಂತೆ ಒಟ್ಟಾರೆಯಾಗಿ 1,56,000 ಪೊಲೀಸ್ ಅಧಿಕಾರಿ, ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಮತಗಟ್ಟೆಗಳ ನಿರ್ವಹಣೆ : ಒಟ್ಟು 18,282 ಮತಗಟ್ಟೆಗಳಿದ್ದು, ಅದರಲ್ಲಿ 11,417 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ಅನುಗುಣವಾಗಿ ಸೂಕ್ಷ್ಮ ಮತಗಟ್ಟೆಗಳಿಗೆ ಪೊಲೀಸ್ ಸಿಬ್ಬಂದಿ ಜೊತೆಗೆ ಹೆಚ್ಚುವರಿಯಾಗಿ ಸಿಎಪಿಎಫ್ ಕಂಪನಿಗಳನ್ನು ನಿಯೋಜನೆ ಮಾಡಲಾಗಿದೆ.

ಒಟ್ಟು 2,930 ಸೆಕ್ಟರ್ ಮೊಬೈಲ್ಸ್‍ಗಳು ಕಾರ್ಯಾಚರಣೆಯಲ್ಲಿದ್ದು, ಒಂದೊಂದು ಸೆಕ್ಟರ್ ಮೊಬೈಲ್‍ಗಳಿಗೆ 20 ಬೂತ್‍ಗಳನ್ನು ನಿಗದಿಪಡಿಸಲಾಗಿದ್ದು, ಪಿ.ಎಸ್.ಐ, ಎಎಸ್‍ಐ ದರ್ಜೆಯ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನೇಮಿಸಿ ನಿರಂತರವಾದ ಗಸ್ತನ್ನು ಕೈಗೊಳ್ಳಲಾಗುತ್ತದೆ, ಸೆಕ್ಟರ್ ಮೊಬೈಲ್ಸ್‍ಗಳ ಮೇಲ್ವಿಚಾರಣೆಗಾಗಿ 749 ಮೇಲ್ವಿಚಾರಣಾ ಮೊಬೈಲ್‍ಗಳಿದ್ದು, ಮೇಲ್ವಿಚಾರಣಾ ಮೊಬೈಲ್ಸ್‍ನ ಉಸ್ತುವಾರಿಗಾಗಿ ಓರ್ವ ಪೊಲೀಸ್ ಇನ್ಸ್ಪೆಕ್ಟರ್ ದರ್ಜೆಯ ಅಧಿಕಾರಿಯನ್ನು ನೇಮಿಸಿದ್ದು, ಸದರಿ ಅಧಿಕಾರಿಯು 04 ಸೆಕ್ಟರ್ ಮೊಬೈಲ್‍ಗಳ ಮೇಲ್ವಿಚಾರಣೆಯನ್ನು ನಿರ್ವಹಿಸುತ್ತಾರೆ. ಡಿವೈಎಸ್‍ಪಿ ದರ್ಜೆಯ ಅಧಿಕಾರಿಯ ಉಸ್ತುವಾರಿಯಲ್ಲಿ 236 ಉಪವಿಭಾಗೀಯ ಮೊಬೈಲ್‍ಗಳಿದ್ದು, ಸಹಜವಾಗಿ ಒಂದು ಮೊಬೈಲ್‍ನಿಂದ ಒಂದು ವಿಧಾನಸಭಾ ಕ್ಷೇತ್ರವನ್ನು ನಿರ್ವಹಿಸಲಾಗುತ್ತಿದೆ.

ಮತದಾನ ದಿನದಂದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ಮತ್ತು ಚುನಾವಣಾ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ 700ಕ್ಕೂ ಹೆಚ್ಚು ವಿಚಕ್ಷಣಾ ದಳಗಳನ್ನು ನೇಮಿಸಲಾಗಿದೆ. ಸೂಕ್ಷ್ಮ ಪ್ರದೇಶಗಳನ್ನೊಳಗೊಂಡಂತೆ ಅಂತರ್ ರಾಜ್ಯ ಮತ್ತು ಅಂತರ್ ಜಿಲ್ಲಾ ಗಡಿಭಾಗದಲ್ಲಿ ಸುಮಾರು 700 ಕ್ಕೂ ಹೆಚ್ಚು ಚೆಕ್‍ಪೋಸ್ಟ್‍ಗಳನ್ನು ತೆರೆಯಲಾಗಿರುತ್ತದೆ.

ಜಾಮೀನು ರಹಿತ ವಾರೆಂಟ್‍ಗಳು- ಕಳೆದ 6 ತಿಂಗಳಿನಿಂದ ಜಾರಿ ಆಗದೆ ಇರುವ 5,500 ಜಾಮೀನು ರಹಿತ ವಾರೆಂಟ್‍ಗಳನ್ನು ಜಾರಿ ಮಾಡಲಾಗಿರುತ್ತದೆ. ಕಳೆದ 03 ತಿಂಗಳಲ್ಲಿ ಒಟ್ಟು 24,959 ಜಾಮೀನು ರಹಿತ ವಾರೆಂಟ್‍ಗಳನ್ನು ಜಾರಿ ಮಾಡಲಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ 30,418 ಭದ್ರತಾ ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅವುಗಳಲ್ಲಿ ಸನ್ನಡತೆ ಆಧಾರದ ಮೇಲೆ 53,406 ವ್ಯಕ್ತಿಗಳನ್ನು ಬಾಂಡ್ ಒವರ್ ಮಾಡಲಾಗಿರುತ್ತದೆ. ಹಾಗೂ ಭದ್ರತಾ ಪ್ರಕರಣಗಳನ್ನು ಉಲ್ಲಂಘಿಸಿದ 115 ಪ್ರಕರಣಗಳಲ್ಲಿ ರೂ. 1,57,02,000/-ಗಳನ್ನು ಘೋರ್‍ಪಿಚರ್ (ಮುಟ್ಟುಗೋಲು) ಕ್ರಮವನ್ನು ಕೈಗೊಳ್ಳಲಾಗಿದೆ.

ಚುನಾವಣೆಯಲ್ಲಿ ಕಾನೂನು ಸುವ್ಯವಸ್ಥೆಗೆ ತೊಡಕಾಗದಂತೆ ಶಾಂತಿಯುತವಾದ ಮತದಾನ ನಡೆಯಲು ಒಟ್ಟು 714 ವ್ಯಕ್ತಿಗಳ ವಿರುದ್ಧ ಗಡಿಪಾರು ಕಾಯ್ದೆಯಡಿ ಕಾನೂನು ಕ್ರಮ ಕೈಗೊಂಡಿರುತ್ತದೆ. ಶಾಂತಿಯುತ ಮತದಾನಕ್ಕಾಗಿ 68 ಹವ್ಯಾಸಿ ಅಪರಾಧಿಗಳ ವಿರುದ್ಧ ಗೂಂಡಾ ಕಾಯ್ದೆಯಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕ ರಾಜ್ಯದ ನೆರೆಹೊರೆಯ ರಾಜ್ಯಗಳ ಗಡಿಭಾಗಗಳಲ್ಲಿ, ಶಾಂತಿ, ಸೌಹಾರ್ದತೆಯ ಕಾಪಾಡುವ ನಿಟ್ಟಿನಲ್ಲಿ ವಿವಿಧ ಹಂತದ ಅಧಿಕಾರಿಗಳಾದ ಐಜಿಪಿ, ಎಸ್‍ಪಿ, ಡಿಸಿ ಹಾಗೂ ಇತರೆ ಅಧಿಕಾರಿಗಳ ನೇತೃತ್ವದಲ್ಲಿ ಅಂತರ್ ರಾಜ್ಯ ಗಡಿಭಾಗದ ಜಿಲ್ಲೆಯ ಅಧಿಕಾರಿಗಳೊಂದಿಗೆ 50ಕ್ಕೂ ಹೆಚ್ಚು ಸಮನ್ವಯ ಸಭೆಗಳನ್ನು ಕೈಗೊಂಡಿದ್ದು, ಚುನಾವಣೆಯಲ್ಲಿ ನೆರೆ ರಾಜ್ಯಗಳಿಂದ ಅನಧಿಕೃತ ಹಣ, ಮದ್ಯ, ಉಚಿತ ಹಾಗೂ ಇತರೆ ವಸ್ತುಗಳು ಮತ್ತು ರೌಡಿ ಆಸಾಮಿಗಳು, ಸಮಾಜಘಾತುಕ ವ್ಯಕ್ತಿಗಳ ಚಲನವಲನದ ಬಗ್ಗೆ ಸೂಕ್ತ ನಿಗಾ ವಹಿಸುವ ಸಲುವಾಗಿ ಗಡಿಭಾಗದ ಚೆಕ್‍ಮೋಸ್ಟ್‍ಗಳಲ್ಲಿ ಸೂಕ್ತ ಕಾನೂನು ಕ್ರಮಕೈಗೊಳ್ಳಲು ನಿರ್ಧರಿಸಲಾಗಿದೆ. ಇದೇ ಕಾರಣಕ್ಕಾಗಿ ಹೊರ ರಾಜ್ಯಗಳು ಸಹ ತಮ್ಮ ಗಡಿಭಾಗದಲ್ಲಿ ಚೆಕ್‍ ಪೋಸ್ಟ್ ಗಳನ್ನು (ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಮತ್ತು ಗೋವಾ) ಸ್ಥಾಪಿಸಲಾಗಿದೆ.

ಚುನಾವಣಾ ಕರ್ತವ್ಯಕ್ಕಾಗಿ ನೇಮಿಸಲಾದ ಒಟ್ಟು 650 ಸಿಎಪಿಎಫ್ ಕಂಪನಿಗಳಲ್ಲಿ 101 ಸಿಆರ್‍ಪಿಎಫ್, 108 ಬಿಎಸ್‍ಎಫ್, 75 ಸಿಐಎಸ್‍ಎಫ್, 70 ಐಟಿಬಿಪಿ, 75 ಎಸ್‍ಎಸ್‍ಬಿ, 35 ಆರ್‍ಪಿಎಫ್ ಮತ್ತು 186 ಎಸ್‍ಎಪಿ ಕಂಪನಿಗಳಿದ್ದು, ಅವುಗಳನ್ನು ಸೂಕ್ಷ್ಮ ವಿಧಾನ ಸಭಾ ಕ್ಷೇತ್ರಗಳ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕಾಗಿ ನಿಯೋಜಿಸಲಾಗಿದೆ. ರಾಜಕೀಯ ಮತ್ತು ವೆಚ್ಚ ನಿರ್ವಹಣೆಯಲ್ಲಿ ಸೂಕ್ಷ್ಮವಾಗಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ರೂಟ್ ಮಾರ್ಚ್ ಮಾಡಿಸುವ ಮೂಲಕ ಕಾನೂನು ಸುವ್ಯವಸ್ಥೆ ಜಾಗೃತಿ ಮೂಡಿಸಲಾಗಿದೆ ಹಾಗೂ ಎಫ್‍ಎಸ್‍ಟಿ, ಎಸ್‍ಎಸ್‍ಟಿ, ಇವಿಎಂ ರಕ್ಷಣೆ, ಸೂಕ್ಷ್ಮ ಮತಗಟ್ಟೆಗಳನ್ನು ಹೊಂದಿರುವ ಕ್ಲಸ್ಟರ್ ಮತಗಟ್ಟೆಗಳಲ್ಲಿ ಈ ಕಂಪನಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕಾಗಿ ನಿಯೋಜಿಸಲಾಗಿದೆ.

ಚುನಾವಣೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಶಾಂತಿಯುತ ಮತದಾನಕ್ಕಾಗಿ 650 ಸಿಎಪಿಎಫ್ ಕಂಪನಿಗಳ ಜೊತೆಗೆ ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು 224 ಕೆ.ಎಸ್.ಆರ್.ಪಿ ತುಕಡಿಗಳನ್ನು ನಿಯೋಜಿಸಲಾಗಿರುತ್ತದೆ. ಹೆಚ್ಚುವರಿಯಾಗಿ ಜಿಲ್ಲಾ ನಗರ ಸಶಸ್ತ್ರ ಪಡೆಗಳನ್ನು ಸೇರಿ ಮತದಾನ ದಿನದಂದು ಒಟ್ಟಾರೆಯಾಗಿ 890 ಸ್ಟ್ರೈಕಿಂಗ್ ಪಾರ್ಟಿಗಳು ಚುನಾವಣಾ ಬಂದೋಬಸ್ತ್ ಕಾರ್ಯವನ್ನು ನಿರ್ವಹಿಸಲಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು