ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಅಬ್ಬರ ಹೆಚ್ಚುತ್ತಿದೆ. ರಾಜ್ಯದಲ್ಲಿ ಇಂದು 104 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅದರಲ್ಲಿ ಬೆಂಗಳೂರಿನಲ್ಲಿಯೇ ಬರೊಬ್ಬರಿ 85 ಜನರಿಗೆ ಕೊರೊನಾ ಸೋಂಕು ಹರಡಿದೆ. ಈ ಮೂಲಕ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 271ಕ್ಕೆ ಏರಿಕೆ ಆಗಿದೆ.
ಕಳೆದ 24 ಗಂಟೆಯಲ್ಲಿ 8 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಹಿನ್ನಲೆ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇಕಡಾ 5.93ರಷ್ಟಿದೆ.