15ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೊರೊನಾ ಲಸಿಕೆ:ಇಂದಿನಿಂದ ನೋಂದಣಿ ಪ್ರಾರಂಭ

ಬೆಂಗಳೂರು:ಇಂದಿನಿಂದ ಮಕ್ಕಳಿಗೆ ಲಸಿಕೆ ನೀಡುವುದಕ್ಕೆ ನೋಂದಣಿ ಆರಂಭವಾಗಿದೆ. 2007ರಲ್ಲಿ ಅಥವಾ ಅದಕ್ಕಿಂತ ಮೊದಲು ಜನಿಸಿದ ಎಲ್ಲಾ ಮಕ್ಕಳಿಗೂ ಲಸಿಕೆ ನೀಡಲು ನಿರ್ದರಿಸಲಾಗಿದ್ದು, ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ.ಪ್ರತಿಯೊಂದು ಶಿಕ್ಷಣ ಸಂಸ್ಥೆಗಳು ತಮಗೆ ಬೇಕಾದ ಡೋಸ್‍ಗಳ ಮಾಹಿತಿಯನ್ನು ಜಿಲ್ಲಾ ಆರೋಗ್ಯಾಕಾರಿಗಳಿಗೆ ನೀಡಿದರೆ ಆಯಾ ಶಿಕ್ಷಣ ಸಂಸ್ಥೆಗಳ ಬಳಿಯೇ ಲಸಿಕೆ ಹಾಕುವ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.

ಮಕ್ಕಳ ಆಧಾರ್ ಕಾರ್ಡ್ ಅಥವಾ ಶಾಲೆಯ ಗುರುತಿನ ಚೀಟಿಯನ್ನು ಲಗತ್ತಿಸಿ ನೋಂದಣಿ ಮಾಡಬಹುದಾಗಿದೆ. 15ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಮೊಬೈಲ್ ಸಂಖ್ಯೆ ಇದ್ದರೆ ಅವರು ನಂಬರ್ ರಿಜಿಸ್ಟ್ರಾರ್ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಪೋಷಕರು ಅಥವಾ ಶಾಲೆಯ ಮುಖ್ಯೋಪಾಧ್ಯಾಯರ ನಂಬರ್ ರಿಜಿಸ್ಟ್ರಾರ್ ಮಾಡಿಕೊಂಡು ಲಸಿಕೆ ಪಡೆಯಬಹುದು.

ಮಕ್ಕಳಿಗೆ ಕೋವ್ಯಾಕ್ಸಿನ್ 0.05 ಮಿಲಿ ಡೋಸ್ ನೀಡಲಾಗುತ್ತದೆ. 15ರಿಂದ 18 ವಯೋಮಿತಿಯ ಮಕ್ಕಳು ಓದುವ ಎಲ್ಲಾ ಶಿಕ್ಷಣ ಸಂಸ್ಥೆಗಳ ಮುಂದೆ ಲಸಿಕಾ ಶಿಬಿರಗಳನ್ನು ಆಯೋಜನೆ ಮಾಡಿ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಯಾ ವಲಯ ಜಂಟಿ ಆಯುಕ್ತರಿಗೆ ಮಾಹಿತಿ ಸಲ್ಲಿಸಬೇಕು. ಇತರೆ ಕಾಯಿಲೆ ಇರುವ ಮಕ್ಕಳಿಗೆ ಲಸಿಕೆ ನೀಡಲು ವೈದ್ಯರ ಪತ್ರ ಹಾಗೂ ಪೋಷಕರ ಸಹಮತ ಪತ್ರ ಕಡ್ಡಾಯವಾಗಿರುತ್ತದೆ.

15 ದಿನಗಳ ಒಳಗಾಗಿ ಟಿಡಿ ಅಥವಾ ಇನ್ನಿತರೆ ಲಸಿಕೆ ಪಡೆದಿದ್ದರೆ ಅಂತಹ ಮಕ್ಕಳಿಗೆ 15 ದಿನಗಳ ನಂತರ ಲಸಿಕೆ ನೀಡಲಾಗುವುದು. ಮಕ್ಕಳಿಗೆ ಲಸಿಕೆ ನೀಡಲು ಕನಿಷ್ಠ ಮೂರು ಕೌಂಟರ್‍ಗಳ ವ್ಯವಸ್ಥೆ ಮಾಡಲಾಗುವುದು. ಆಫ್‍ಲೈನ್ ವಿದ್ಯಾರ್ಥಿಗಳಿಗೆ ಆಯಾ ಶಾಲಾ-ಕಾಲೇಜುಗಳಿನವರೇ ಲಸಿಕೆ ಪಡೆಯುವಂತೆ ನೋಡಿಕೊಳ್ಳಬೇಕು.

ಖಾಸಗಿ ಆಸ್ಪತ್ರೆಯಲ್ಲೂ ಪೊಷಕರು ಮಕ್ಕಳಿಗೆ ಲಸಿಕೆ ಹಾಕಿಸಿಕೊಳ್ಳಬಹುದಾಗಿದೆ. ಶಾಲೆ, ಕಾಲೇಜಿನಿಂದ ಹೊರಗುಳಿದಿರುವ ಮಕ್ಕಳಿಗೆ ನಗರಾಭಿವೃದ್ಧಿ ಇಲಾಖೆ, ಪಂಚಾಯತ್‍ರಾಜ್, ಗ್ರಾಮೀಣಾಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಲಸಿಕೆ ನೀಡಲಾಗುವುದು.

Swathi MG

Recent Posts

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

26 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

29 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

52 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

1 hour ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

1 hour ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

1 hour ago