ಬೆಂಗಳೂರು: ಸಂಚಾರ ದಟ್ಟಣೆ ನಿಭಾಯಿಸುವ ನಿಟ್ಟಿನಲ್ಲಿ 15 ವರ್ಷ ಹಳೆಯ ವಾಹನಗಳಿಗೆ ನಿಷೇಧ ಹೇರಲಾಗುವುದು ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು ಹೇಳಿದರು.
ಅವರು ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಸಮಾರೋಪದಲ್ಲಿ ಹೇಳಿದರು. ನಗರ ವ್ಯಾಪ್ತಿ ಮಟ್ಟದಲ್ಲಿ ವಾಹನ ಸಂಚಾರ ದಟ್ಟಣೆ ನಿಭಾಯಿಸುವ ನಿಟ್ಟಿನಲ್ಲಿ ವಾರ್ಡ್ ಮಟ್ಟದಲ್ಲಿ ಜಾಗೃತಿ, ಅರಿವು ಮೂಡಿಸಲಾಗುವುದು ಎಂದರು.