ಬೆಂಗಳೂರು: ಮಕ್ಕಳಿಗೆ ಲಸಿಕೆ ನೀಡಲು ಬಿಬಿಎಂಪಿ ವ್ಯಾಪ್ತಿಯ ಎಸ್ಎಸ್ಎಲ್ಸಿ ಮತ್ತು ದ್ವೀತಿಯ ಪಿಯುಸಿ ವ್ಯಾಸಂಗ ಮಾಡುತ್ತಿರುವ 7 ಲಕ್ಷ ಮಕ್ಕಳಿಗೆ ವ್ಯಾಕ್ಸಿನ್ ಹಾಕಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಆನ್ಲೈನ್ ಪಾಠ ಕೇಳುವ ಮಕ್ಕಳು ಲಸಿಕೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಬಿಬಿಎಂಪಿ ಅಧಿಕಾರಿಗಳು ಆನ್ಲೈನ್ ಪಾಠ ಕೇಳುವ ಮಕ್ಕಳ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಈ ಹಿಂದೆ ಕಾಲೇಜುಗಳಲ್ಲಿ ಲಸಿಕೆ ನೀಡಿದ ಮಾದರಿಯಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಶಾಲೆಗಳಲ್ಲಿ ವ್ಯಾಕ್ಸಿನ್ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಲಸಿಕೆ ನೀಡಿಕೆಗಾಗಿ ಕೇಂದ್ರದ ತಂಡದಿಂದ ಬಿಬಿಎಂಪಿ ಅಧಿಕಾರಿಗಳು ಅಗತ್ಯ ಸಲಹೆ ಸೂಚನೆ ಪಡೆದುಕೊಂಡಿದ್ದಾರೆ.
ಎಸ್ಎಸ್ಎಲ್ಸಿ ಮತ್ತು ದ್ವೀತಿಯ ಪಿಯುಸಿ ವ್ಯಾಸಂಗ ಮಾಡುತ್ತಿರುವ 7 ಲಕ್ಷ ಮಕ್ಕಳಿಗೆ ಲಸಿಕೆ ಹಾಕಲು ಬಿಬಿಎಂಪಿ ತಯಾರಿ ಆರಂಭಿಸಿದೆ.ಮಕ್ಕಳಿಗೆ ಮೊದಲ ಬಾರಿಗೆ ವ್ಯಾಕ್ಸಿನ್ ಹಾಕುತ್ತಿರುವ ಹಿನ್ನೆಲೆಯಲ್ಲಿ ಲಸಿಕಾ ಕೇಂದ್ರಗಳ ಬಳಿ 30ನಿಮಿಷಗಳ ವಿಶ್ರಾಂತಿ ಪಡೆಯಲು ಸಹಕಾರಿಯಾಗುವಂತೆ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ.
ಶಾಲೆಗಳ ಸಮೀಪವೂ ವಿಶ್ರಾಂತಿ ಕೊಠಡಿ ತಯಾರಿ ಮಾಡುವುದರ ಜೊತೆಗೆ ಮಕ್ಕಳ ನಿಗಾ ದೃಷ್ಟಿಯಿಂದ ಲಸಿಕೆ ನೀಡುವ ಎಲ್ಲ ಶಾಲೆಗಳ ಬಳಿ ಆಂಬುಲೆನ್ಸ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
ಮೊದಲ ಹಂತದಲ್ಲಿ ಸರ್ಕಾರಿ ಹಾಗೂ ಬಿಬಿಎಂಪಿ ಶಾಲಾ ಕಾಲೇಜುಗಳಲ್ಲಿ ಲಸಿಕೆ ವಿತರಣೆ ಮಾಡಿ ನಂತರ ಖಾಸಗಿ ಶಾಲೆ ಕಾಲೇಜಿನ ಮಕ್ಕಳಿಗೆ ವ್ಯಾಕ್ಸಿನ್ ಹಾಕಲಾಗುವುದು. ಈ ಕುರಿತಂತೆ ಈಗಾಗಲೆ ಬಿಬಿಎಂಪಿ ಅಧಿಕಾರಿಗಳು ಖಾಸಗಿ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಜೊತೆ ಸಭೆ ನಡೆಸಿದ್ದಾರೆ.
ಈಗಾಗಲೇ ಖಾಸಗೀ ಶಾಲೆ.ಕಾಲೇಜುಗಳ ಮಾಹಿತಿ ಸಂಗ್ರಹ.. ಪ್ರತಿ ದಿನ ಒಂದು ಶಾಲಾ ಕಾಲೇಜಿನಲ್ಲಿ 100 ಮಕ್ಕಳಿಗೆ ಲಸಿಕೆ ವಿತರಣೆ ಮಾಡಿ ನಂತರ ಹೆಚ್ಚು ಮಕ್ಕಳಿಗೆ ಲಸಿಕೆ ನೀಡೋದಕ್ಕೆ ಪ್ಲಾನ್ ರೂಪಿಸಲಾಗಿದೆ. ಮಕ್ಕಳಿಗೆ ವ್ಯಾಕ್ಸಿನ್ ಹಾಕಿಸಿಕೊಳ್ಳುವಂತೆ ಬಿಬಿಎಂಪಿ ವತಿಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ವ್ಯಾಕ್ಸಿನ್ ಪಡದ ವಿದ್ಯಾರ್ಥಿಗಳಿಗೆ ಮೂರು ದಿನಗಳ ರಜೆ ನೀಡಲಾಗುವುದು.
ಒಂದು ವೇಳೆ ಪೋಷಕರು ತಮ್ಮ ಮಕ್ಕಳಿಗೆ ಖಾಸಗೀ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಿಸಿಕೊಳ್ಳಲು ಮುಂದಾದರೆ ಅದಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.