News Karnataka Kannada
Tuesday, April 30 2024
ಬೆಂಗಳೂರು ನಗರ

ಬೆಂಗಳೂರು: ಇಂದು ರಾಜ್ಯದಲ್ಲಿ 1,624 ಮಂದಿಯಲ್ಲಿ ಕೊರೋನಾ ಪ್ರಕರಣ ಪತ್ತೆ

2,797 people tested positive for coronavirus in the last 24 hours in the country.
Photo Credit : Pixabay

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಕಾಣುತ್ತಿದ್ದು, ಕಳೆದ 24 ಗಂಟೆಯಲ್ಲಿ 1,624 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,99,766ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,094ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 1,176 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,30,482ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾರೂ ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1,647 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,50,794ಕ್ಕೆ ಏರಿಕೆಯಾಗಿದೆ. ಇನ್ನು 8,836 ಸಕ್ರಿಯ ಪ್ರಕರಣಗಳಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು