News Karnataka Kannada
Monday, May 06 2024
ಬೆಂಗಳೂರು ನಗರ

2ನೇ ಬಾರಿ ಕೊರೊನಾ ಗೆದ್ದ ಸಿಎಂ ಯಡಿಯೂರಪ್ಪ

Photo Credit :

2ನೇ ಬಾರಿ ಕೊರೊನಾ ಗೆದ್ದ ಸಿಎಂ ಯಡಿಯೂರಪ್ಪ

ಬೆಂಗಳೂರು, : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಸೋಂಕಿನ ಎರಡು ಅಲೆಗಳನ್ನು ಎದುರಿಸಿ ಯಡಿಯೂರಪ್ಪ ಅವರು ಜಯಿಸಿದ್ದಾರೆ.ಯಡಿಯೂರಪ್ಪ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಡಿಸ್ಚಾರ್ಜ್ ಮಾಡಲಾಗಿದೆ, ಯಡಿಯೂರಪ್ಪ ಅವರ ಮೊಮ್ಮಗಳು ಕೂಡಾ ಗುಣಮುಖರಾಗಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆ ತಿಳಿಸಿದೆ.
ಆಸ್ಪತ್ರೆಯಿಂದ ನೇರವಾಗಿ ತಮ್ಮ ಅಧಿಕೃತ ನಿವಾಸ ಕಾವೇರಿಗೆ ಯಡಿಯೂರಪ್ಪ ತೆರಳಿದ್ದು, ಇದಕ್ಕೂ ಮುನ್ನ ಮಾತನಾಡಿ, ಕೊರೊನಾ ಸೋಂಕು ಎಲ್ಲೆಡೆ ವೇಗವಾಗಿ ಹಬ್ಬುತ್ತಿದೆ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಯ್ದುಕೊಳ್ಳಿ, ಅನಗತ್ಯವಾಗಿ ಹೊರಗಡೆ ಓಡಾಡಬೇಡಿ. ಕರ್ಫ್ಯೂ ನಿಯಮಗಳನ್ನು ಪಾಲಿಸಿ ಎಂದರು.ನಾನು ಈಗಾಗಲೇ ಅಗತ್ಯ ವಿಶ್ರಾಂತಿ ಪಡೆದಿದ್ದೇನೆ, ವೈದ್ಯರ ಸಲಹೆಯಂತೆ ನಡೆದುಕೊಂಡಿದ್ದೇನೆ, ಇಂದು ಸಂಜೆ ಸಭೆಯಲ್ಲಿ ಪಾಲ್ಗೊಳ್ಳಲಿದ್ದೇನೆ ಎಂದರು.ಗುರುವಾರ ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ನೈಟ್ ಕರ್ಫ್ಯೂ, ಹೊಸ ಮಾರ್ಗಸೂಚಿ ಪ್ರಗತಿ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು