News Karnataka Kannada
Monday, April 29 2024
ಬೆಂಗಳೂರು ನಗರ

20 ಸಾವಿರ ಶಾಲೆಗಳಲ್ಲಿ ಮಾತ್ರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ

School
Photo Credit : News Kannada

ಬೆಂಗಳೂರು: 2022 -23 ನೇ ಸಾಲಿನಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲು ಸರ್ಕಾರ ನಿರ್ಧರಿಸಿದ್ದು, ಎಲ್ಲಾ ಶಾಲೆಗಳಲ್ಲಿ  ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುವುದಿಲ್ಲ.ಅಂಗನವಾಡಿ ಕೇಂದ್ರಗಳನ್ನು ಹೊಂದಿರುವ, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಎನ್‌ಇಪಿ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ.

20,000 ಶಾಲೆಗಳಲ್ಲಿ ಮಾತ್ರ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗುತ್ತದೆ.ಮುಂದಿನ ಶೈಕ್ಷಣಿಕ ಸಾಲಿನಿಂದ ಎಲ್ಲ ಶಾಲೆಗಳಲ್ಲಿಯೂ ಎನ್‌ಇಪಿ ಜಾರಿಯಾಗಲ್ಲ. ಎನ್‌ಇಪಿ ಜಾರಿಗೊಳಿಸುವ ಕುರಿತಂತೆ ಶಿಕ್ಷಣ ಇಲಾಖೆಯಲ್ಲಿ ಕಾಯ್ದೆ, ಕಾನೂನು, ಪಠ್ಯಕ್ರಮ ಸೇರಿದಂತೆ ಅನೇಕ ವಿಷಯಗಳ ತಿದ್ದುಪಡಿ ಆಗಬೇಕಿದೆ ಎಂದು ಹೇಳಲಾಗಿದೆ.

ಇನ್ನು ರಾಜ್ಯದಲ್ಲಿ ಎನ್‌ಇಪಿ ಜಾರಿಗೆ ಕ್ರಮಕೈಗೊಳ್ಳಲಾಗಿದ್ದರೂ, 2021 -22 ನೇ ಸಾಲಿನ ಬಜೆಟ್ನಲ್ಲಿ ಹಣ ನೀಡಿಲ್ಲ. ಕೇಂದ್ರ ಸರ್ಕಾರ ಕೂಡ ಈ ಸಾಲಿನ ಬಜೆಟ್ನಲ್ಲಿ ಹಣ ಘೋಷಣೆ ಮಾಡಿಲ್ಲ.

ಈ ಬಗ್ಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಮುಂದಿನ ಶೈಕ್ಷಣಿಕ ಸಾಲಿನಿಂದ 20,000 ಶಾಲೆಗಳಲ್ಲಿ ಎನ್‌ಇಪಿ ಜಾರಿಗೆ ಕ್ರಮಕೈಗೊಂಡಿದ್ದು, ಬಜೆಟ್ ನಲ್ಲಿ ಅನುದಾನ ನೀಡುವಂತೆ ಸಿಎಂಗೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು