News Karnataka Kannada
Thursday, April 25 2024
Cricket
ಬೆಂಗಳೂರು ನಗರ

40 ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕ ನಿರ್ಮಾಣಕ್ಕೆ ಒಪ್ಪಿಗೆ

Photo Credit :

40 ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕ ನಿರ್ಮಾಣಕ್ಕೆ ಒಪ್ಪಿಗೆ

ಬೆಂಗಳೂರು, ಮೇ 07; ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 17,90,104ಕ್ಕೆ ಏರಿಕೆಯಾಗಿದೆ. ಕೋವಿಡ್ ರೋಗಿಗಳು ಬೆಡ್ ಸಿಗುತ್ತಿಲ್ಲ ಎಂದು ಪರದಾಡುತ್ತಿದ್ದಾರೆ. ಮತ್ತೊಂದು ಕಡೆ ಆಕ್ಸಿಜನ್ ಕೊರತೆಯೂ ಕಾಡುತ್ತಿದೆ.ವಿವಿಧ ಜಿಲ್ಲೆಗಳಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಒದಗಿಸಲು ಹರಸಾಹಸಪಡುತ್ತಿವೆ. 10 ಜಿಲ್ಲಾಸ್ಪತ್ರೆ ಮತ್ತು 30 ತಾಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆಗೆ ಆರೋಗ್ಯ ಇಲಾಖೆ ಒಪ್ಪಿಗೆ ನೀಡಿದೆ.
ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಈ ವಿಷಯವನ್ನು ತುರ್ತಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ಕೊಡಲಾಗಿದೆ. ಘಟಕ ಸ್ಥಾಪನೆಗೆ ಅಗತ್ಯವಿರುವ ಸಿವಿಲ್ ಮತ್ತು ವಿದ್ಯುತ್ ಕಾಮಗಾರಿಯನ್ನು ತಕ್ಷಣವೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಣೆ ಮಾಡುವ ಅರ್ಹ ಗುತ್ತಿಗೆದಾರನಿಂದ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಲಾಗಿದೆ. 10 ಜಿಲ್ಲಾ ಆಸ್ಪತ್ರೆಗಳಲ್ಲಿ 500 ಎಲ್‌ಪಿಎಂ ಮತ್ತು 30 ತಾಲೂಕು ಆಸ್ಪತ್ರೆಗಳಲ್ಲಿ 390 ಎಲ್‌ಪಿಎಂ ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣ ಮಾಡಲಾಗುತ್ತದೆ. ಪಿಎಸ್‌ಎ ತಂತ್ರಜ್ಞಾನದ ಅಡಿ ಘಟಕ ನಿರ್ಮಾಣಗೊಳ್ಳಲಿದೆ.40 ಆಸ್ಪತ್ರೆಗಳ ಪೈಕಿ ಬೆಂಗಳೂರು, ಕಲಬುರಗಿ, ಮೈಸೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಗದಗ, ಹಾಸನ ಮತ್ತು ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಗಳು ಸೇರಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು