News Karnataka Kannada
Tuesday, May 07 2024
ಬೆಂಗಳೂರು ನಗರ

40 ಪರ್ಸೆಂಟ್‌ ಕಮಿಷನ್‌: ಬಿಜೆಪಿ, ಕಾಂಗ್ರೆಸ್‌ ಸರ್ಕಾರದ ವಿರುದ್ಧ 6 ಸಾವಿರ ಪುಟಗಳ ದಾಖಲೆ ಸಲ್ಲಿಕೆ

40 ಪರ್ಸೆಂಟ್ ಕಮಿಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಅವರು ಗುರುವಾರ ಬಿಜೆಪಿ ಮತ್ತು ಹಾಲಿ ಸರ್ಕಾರದ ವಿರುದ್ಧ 6 ಸಾವಿರ ಪುಟಗಳ ಭ್ರಷ್ಟಾಚಾರದ ದಾಖಲೆಯನ್ನು ನಿವೃತ್ತ ನ್ಯಾ. ಎಚ್‌.ಎನ್.ನಾಗಮೋಹನ್ ದಾಸ್‌ ಸಮಿತಿಗೆ ಸಲ್ಲಿದ್ದಾರೆ.
Photo Credit : News Kannada

ಬೆಂಗಳೂರು: 40 ಪರ್ಸೆಂಟ್ ಕಮಿಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಅವರು ಗುರುವಾರ ಬಿಜೆಪಿ ಮತ್ತು ಹಾಲಿ ಸರ್ಕಾರದ ವಿರುದ್ಧ 6 ಸಾವಿರ ಪುಟಗಳ ಭ್ರಷ್ಟಾಚಾರದ ದಾಖಲೆಯನ್ನು ನಿವೃತ್ತ ನ್ಯಾ. ಎಚ್‌.ಎನ್.ನಾಗಮೋಹನ್ ದಾಸ್‌ ಸಮಿತಿಗೆ ಸಲ್ಲಿದ್ದಾರೆ.

ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದ ಆಡಿಯೋ, ವಿಡಿಯೋ ಸೇರಿದಂತೆ 6 ಸಾವಿರ ಪುಟಗಳ ದಾಖಲೆಗಳನ್ನು ಕೆಂಪಣ್ಣ ಅವರು ಇಂದು ಲೋಕೋಪಯೋಗಿ ಇಲಾಖೆ ಕಚೇರಿಗೆ ಸಲ್ಲಿಸಿದರು.

ಹಿಂದಿನ ಬಿಜೆಪಿ ಸರ್ಕಾರದಲ್ಲಿ ನೀರಾವರಿ, ಕೃಷಿ, ಜಲಸಂಪನ್ಮೂಲ, ಆರೋಗ್ಯ ಇಲಾಖೆ ಸೇರಿ ಇತರೆ ಇಲಾಖೆಗಳ ಭ್ರಷ್ಟಾಚಾರದ ದಾಖಲೆಗಳನ್ನು ನೀಡಲಾಗಿದೆ. ಹಿರಿತನ‌ ಆಧಾರದಲ್ಲಿ ಬಾಕಿ ಬಿಲ್ ಪಾವತಿ ಮಾಡುತ್ತಿಲ್ಲ. ಕಮಿಷನ್ ನೀಡಿದವರಿಗೆ ಮಾತ್ರ ಬಾಕಿ ಹಣ ಪಾವತಿ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿತ್ತು. ವರದಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಂಪಣ್ಣ ಅವರು, ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ.

ಹಿಂದಿನ ಬಿಜೆಪಿ ಸರ್ಕಾರ, ಹಾಲಿ ಸರ್ಕಾರದ ವಿರುದ್ಧ ದಾಖಲೆಗಳನ್ನು ಸಲ್ಲಿಸಿದ್ದೇನೆ. ಎಲ್ಲಾ ಇಲಾಖೆಯ ಕಾಮಗಾರಿಗೆ ಸಂಬಂಧಿಸಿದ ದಾಖಲೆ ಸಲ್ಲಿಸಿದ್ದೇನೆ. ಎಲ್ಲಾ ಜಿಲ್ಲೆಗಳ ಕಾಮಗಾರಿ ಅಕ್ರಮದ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು