ಬೆಂಗಳೂರು: 40 ಪರ್ಸೆಂಟ್ ಕಮಿಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಅವರು ಗುರುವಾರ ಬಿಜೆಪಿ ಮತ್ತು ಹಾಲಿ ಸರ್ಕಾರದ ವಿರುದ್ಧ 6 ಸಾವಿರ ಪುಟಗಳ ಭ್ರಷ್ಟಾಚಾರದ ದಾಖಲೆಯನ್ನು ನಿವೃತ್ತ ನ್ಯಾ. ಎಚ್.ಎನ್.ನಾಗಮೋಹನ್ ದಾಸ್ ಸಮಿತಿಗೆ ಸಲ್ಲಿದ್ದಾರೆ.
ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದ ಆಡಿಯೋ, ವಿಡಿಯೋ ಸೇರಿದಂತೆ 6 ಸಾವಿರ ಪುಟಗಳ ದಾಖಲೆಗಳನ್ನು ಕೆಂಪಣ್ಣ ಅವರು ಇಂದು ಲೋಕೋಪಯೋಗಿ ಇಲಾಖೆ ಕಚೇರಿಗೆ ಸಲ್ಲಿಸಿದರು.
ಹಿಂದಿನ ಬಿಜೆಪಿ ಸರ್ಕಾರದಲ್ಲಿ ನೀರಾವರಿ, ಕೃಷಿ, ಜಲಸಂಪನ್ಮೂಲ, ಆರೋಗ್ಯ ಇಲಾಖೆ ಸೇರಿ ಇತರೆ ಇಲಾಖೆಗಳ ಭ್ರಷ್ಟಾಚಾರದ ದಾಖಲೆಗಳನ್ನು ನೀಡಲಾಗಿದೆ. ಹಿರಿತನ ಆಧಾರದಲ್ಲಿ ಬಾಕಿ ಬಿಲ್ ಪಾವತಿ ಮಾಡುತ್ತಿಲ್ಲ. ಕಮಿಷನ್ ನೀಡಿದವರಿಗೆ ಮಾತ್ರ ಬಾಕಿ ಹಣ ಪಾವತಿ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿತ್ತು. ವರದಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಂಪಣ್ಣ ಅವರು, ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ.
ಹಿಂದಿನ ಬಿಜೆಪಿ ಸರ್ಕಾರ, ಹಾಲಿ ಸರ್ಕಾರದ ವಿರುದ್ಧ ದಾಖಲೆಗಳನ್ನು ಸಲ್ಲಿಸಿದ್ದೇನೆ. ಎಲ್ಲಾ ಇಲಾಖೆಯ ಕಾಮಗಾರಿಗೆ ಸಂಬಂಧಿಸಿದ ದಾಖಲೆ ಸಲ್ಲಿಸಿದ್ದೇನೆ. ಎಲ್ಲಾ ಜಿಲ್ಲೆಗಳ ಕಾಮಗಾರಿ ಅಕ್ರಮದ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದರು.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…
ಇಂದು ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ಗೆದ್ದು…
ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…
ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ದಾಖಲಾಗಿದೆ.ಶಾಸಕರು ತನ್ನ…
ಕಾರು ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್ ಮಾಡಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಬ್ಯಾಂಕ್ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…