News Karnataka Kannada
Monday, May 20 2024
ಬೆಂಗಳೂರು ನಗರ

ಬೆಂಗಳೂರು: ದೀಕ್ಷಾಭೂಮಿ ಯಾತ್ರೆಗೆ ಐದು ಸಾವಿರ ಅನುಯಾಯಿಗಳು- ಶ್ರೀನಿವಾಸ ಪೂಜಾರಿ

Congress govt can't ask for Names of Hindus: Kota Srinivas Poojary
Photo Credit : By Author

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಬೌದ್ಧಧರ್ಮದ ದೀಕ್ಷೆ ಪಡೆದ ಸ್ಥಳವಾದ ಮಹಾರಾಷ್ಟ್ರದ ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಈ ಬಾರಿ ಕರ್ನಾಟಕದಿಂದ ಸುಮಾರು 5 ಸಾವಿರ ಅನುಯಾಯಿಗಳನ್ನು ಸರ್ಕಾರದ ವತಿಯಿಂದ ಕಳುಹಿಸಿಕೊಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಬೇರೆ ಧರ್ಮದವರು ವಿವಿಧ ಕ್ಷೇತ್ರಗಳಿಗೆ ಯಾತ್ರೆ ಮಾಡುವ ಮಾದರಿಯಲ್ಲಿ ಡಾ.ಅಂಬೇಡ್ಕರ್ ಅವರ ಅನುಯಾಯಿಗಳು ಪ್ರತಿ ವರ್ಷವೂ ಅಕ್ಟೋಬರ್ ತಿಂಗಳಿನಲ್ಲಿ ನಾಗಪುರದಲ್ಲಿ ನಡೆಯುವ ದಮ್ಮ ಪ್ರವರ್ತನಾ ದಿನ ಕಾರ್ಯಕ್ರಮಕ್ಕೆ ದೀಕ್ಷಾಯಾತ್ರೆ ಕೈಗೊಳ್ಳುವುದು ವಾಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬಾಬಾ ಸಾಹೇಬರ ಅನುಯಾಯಿಗಳನ್ನು ಪ್ರತಿ ವರ್ಷವೂ ದೀಕ್ಷಾಯಾತ್ರೆಗೆ ಕಳುಹಿಸಲಾಗುತ್ತಿದ್ದು ಈ ವರ್ಷ ಐದು ಸಾವಿರ ಅನುಯಾಯಿಗಳನ್ನು ನಾಗಪುರ ದೀಕ್ಷಾಯಾತ್ರೆಗೆ ಕಳುಹಿಸುತ್ತಿರುವುದಾಗಿ ಅವರು ತಿಳಿಸಿದರು.

ಈ ಹಿಂದೆ ಸುಮಾರು 2 ಸಾವಿರ ಜನರನ್ನು ಯಾತ್ರೆಗೆ ಕಳುಹಿಸುವ ವ್ಯವಸ್ಥೆಯನ್ನು ಇಲಾಖೆ ರೂಪಿಸಿತ್ತು. ಈ ಮಧ್ಯೆ ಕೋವಿಡ್ ಕಾರಣದಿಂದ ಕಳೆದೆರಡು ವರ್ಷ ಯಾತ್ರೆ ಮಾಡಿಸಲು ಸಾಧ್ಯವಾಗಿರಲಿಲ್ಲ. ಈ ಬಾರಿ ಐದು ಸಾವಿರ ಅನುಯಾಯಿಗಳು ರಾಜ್ಯದ ಎಲ್ಲ ಜಿಲ್ಲೆಗಳಿಂದ ತೆರಳಲು ವ್ಯವಸ್ಥೆ ಮಾಡಲಾಗಿದೆ ಎಂದರು.

ಯಾತ್ರೆ ಕೈಗೊಳ್ಳುವ ಅನುಯಾಯಿಗಳು ಆನ್ ಲೈನ್ ಮೂಲಕ ನೋಂದಣಿ ಮಾಡಿದ್ದು ಆಯಾ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಯಾತ್ರಿಗಳನ್ನು ಸುರಕ್ಷಿತವಾಗಿ ನಾಗಪುರ ದೀಕ್ಷಾಯಾತ್ರೆಗೆ ಕರೆದೊಯ್ಯಲು ಬಸ್ ವ್ಯವಸ್ಥೆ ಕಲ್ಪಿಸಲು ಆದೇಶಿಸಲಾಗಿದೆ. ರಾಜ್ಯಾದ್ಯಂತ ಈ ಯೋಜನೆಗಾಗಿ ಸುಮಾರು 2.5 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು