61 ವರ್ಷದ ಡಿ.ಕೆ. ಶಿವಕುಮಾರ್‌ ನಾಪತ್ತೆಯಾಗಿದ್ದಾರೆ ಎಂದು ಬಿಜೆಪಿ ಪೋಸ್ಟ್‌

ಬೆಂಗಳೂರು: ಇಂಡಿಯಾ ಮೈತ್ರಿಕೂಟವನ್ನು ಉಳಿಸಿಕೊಳ್ಳಲು ಸ್ಟಾಲಿನ್‌ ಕಟ್ಟಪ್ಪಣೆಯ ಮೇರೆಗೆ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿ ಜಲಸಂಪನ್ಮೂಲ ಸಚಿವ ಹಾಗೂ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನಾಪತ್ತೆಯಾಗಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ 61 ವರ್ಷದ ಡಿ.ಕೆ ಶಿವಕುಮಾರ್‌ ಕರ್ನಾಟಕ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದು ಹುಡುಕಿಕೊಟ್ಟವರಿಗೆ 5 ಗ್ಯಾರಂಟಿಗಳು ಉಚಿತ ಎಂದು ಹೇಳಿದೆ.

ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ‘ದೊಡ್ಡಮಟ್ಟದಲ್ಲಿ ಸಹಕರಿಸಿದ’ ಋಣವನ್ನು ತೀರಿಸಲು ಹಾಗೂ ಲೋಕಸಭಾ ಚುನಾವಣೆಯ ಬಳಿಕ ಸಿಎಂ ಕುರ್ಚಿಗೆ ಲಾಬಿ ಮಾಡಲು, ಕಾವೇರಿಯನ್ನು ಸ್ಟಾಲಿನ್‌ ನಾಡಿಗೆ ಬೇಕಾಬಿಟ್ಟಿಯಾಗಿ ಹರಿಬಿಟ್ಟು ಜಲಸಂಪನ್ಮೂಲ ಸಚಿವ ಶಿವಕುಮಾರ್‌ ಅವರು ನಾಪತ್ತೆಯಾಗಿದ್ದಾರೆ. ದಯವಿಟ್ಟು ಹುಡುಕಿಕೊಡಿ ಎಂದು ಪೋಸ್ಟ್‌ ಮಾಡಿದೆ.

Gayathri SG

Recent Posts

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

2 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

16 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

32 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

35 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

58 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago