ಬೆಂಗಳೂರು: ಬುಲೆರೊ ಗೂಡ್ಸ್ ವಾಹನದ ಕೆಳಭಾಗದಲ್ಲಿ ಬಾಕ್ಸ್ ಮಾಡಿಕೊಂಡು ಬೀದರ್ನಿಂದ ಗಾಂಜಾ ತಂದು ನಗರದಲ್ಲಿ ಪೆಡ್ಲರ್ಗಳಿಗೆ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಗೂರು ಪೊಲೀಸರು ಬೇಧಿಸಿದ್ದು, ಒಂದು ಕೋಟಿ ಮೌಲ್ಯದ 175 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.
ಬಂಧಿತರು, ಕುಣಿಗಲ್ ತಾಲೂಕಿನ ಕೆ.ಆರ್.ಅರವಿಂದ್(26), ತಾವರೆಕೆರೆ ನಿವಾಸಿ ಪವನ್ ಕುಮಾರ್ (27), ಮಂಗಳೂರಿನ ಅಮ್ಜದ್ ಇತಿ ಯಾರ್ ಅಲಿಯಾಸ್ ಇಮ್ರಾನ್ ಅಲಿಯಾಸ್ ಇರ್ಷಾದ್ (27) ಈ ಆರೋಪಿಗಳ ಮಾಹಿತಿ ಮೇರೆಗೆ ವಿಶೇಷ ಕಾರ್ಯಾಚರಣೆ ನಡೆಸಿ ಬೀದರ್ನ ಭಾಲ್ಕಿ ಪ್ರಭು(27), ದಕ್ಷಿಣ ಕನ್ನಡದ ನಜೀಮ್ (26) ಮತ್ತು ಆಂಧ್ರಪ್ರದೇಶದ ಭೂಪಾಲ ಪಟ್ಟಣಂನ ಪತ್ತಿ ಸಾಯಿ ಚಂದ್ರ ಪ್ರಕಾಶ್ (19) ಆಗಿದ್ದಾರೆ.
ಈ ಆರೋಪಿಗಳ ವಿರುದ್ಧ ಆಂಧ್ರಪ್ರದೇಶ, ಬೆಂಗಳೂರು ನಗರ, ಗ್ರಾಮಾಂತರದ ವಿವಿಧ ಠಾಣೆಯಲ್ಲಿ ಕೊಲೆ, ಕೊಲೆ ಯತ್ನ, ಎನ್ಡಿಪಿಎಸ್ ಹಾಗೂ ದರೋಡೆ ಸೇರಿ ಹಲವು ಅಪರಾಧ ಪ್ರಕರಣಗಳ ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಪ್ರತ್ಯೇಕ ಪ್ರಕರಣಗಳಲ್ಲಿ ಆರೋಪಿಗಳು ಜೈಲಿಗೆ ಹೋದಾಗ ಪರಸ್ಪರ ಪರಿಚಯವಾಗಿ, ದೊಡ್ಡ ಮಟ್ಟದಲ್ಲಿ ಮಾದಕ ವಸ್ತು ಮಾರಾಟ ಜಾಲ ವಿಸ್ತರಿಸಿಕೊಂಡಿದ್ದರು ಎಂದು ಪೊಲೀಸರು ಹೇಳಿದರು.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…
ಇಂದು ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ಗೆದ್ದು…
ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…