ಬೆಂಗಳೂರು: ರಾಜ್ಯದಲ್ಲಿ ದಿನಕ್ಕೆ ಕೋವಿಡ್ ಮಹಾಮಾರಿ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 78 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಇನ್ನು ಬೆಂಗಳೂರು ನಗರದಲ್ಲೇ ಹೊಸದಾಗಿ 68 ಜನರಿಗೆ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸಕ್ರಿಯ ಕೇಸ್ಗಳ ಸಂಖ್ಯೆ 175ಕ್ಕೆ ಏರಿಕೆಯಾಗಿದ್ದು, 162 ಸೋಂಕಿತರು ಹೋಂ ಐಸೋಲೇಷನ್ನಲ್ಲಿ ಇದ್ದರೆ, 13 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 3.29 ಕ್ಕೆ ಏರಿಕೆಯಾಗಿದೆ.