News Karnataka Kannada
Thursday, May 16 2024
ಬೆಂಗಳೂರು ನಗರ

9 ಕೋಟಿ ಮೌಲ್ಯದ ಬಿಟ್‌ಕಾಯಿನ್‌ಗಳನ್ನು ಹ್ಯಾಕರ್‌ನಿಂದ ವಶಪಡಿಸಿಕೊಂಡ ಪೋಲಿಸ್

Photo Credit :

9 ಕೋಟಿ ಮೌಲ್ಯದ ಬಿಟ್‌ಕಾಯಿನ್‌ಗಳನ್ನು ಹ್ಯಾಕರ್‌ನಿಂದ ವಶಪಡಿಸಿಕೊಂಡ ಪೋಲಿಸ್

ಬೆಂಗಳೂರು: ಕರ್ನಾಟಕ ಪೊಲೀಸರು 25 ವರ್ಷದ ಹ್ಯಾಕರ್‌ನಿಂದ 9 ಕೋಟಿ ರೂ.ಗಳ ಮೌಲ್ಯದ ಬಿಟ್‌ಕಾಯಿನ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಬೆಂಗಳೂರು ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಸಂದೀಪ್ ಪಾಟೀಲ್ ಶುಕ್ರವಾರ ಮಾಹಿತಿ ನೀಡಿದ್ದಾರೆ. ಸರ್ಕಾರಿ ವೆಬ್‌ಸೈಟ್‌ಗಳು, ಆನ್‌ಲೈನ್ ಗೇಮಿಂಗ್ ಪೋರ್ಟಲ್‌ಗಳು ಮತ್ತು ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡಿದ ಆರೋಪದ ಮೇಲೆ ಹ್ಯಾಕರ್, ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ನವೆಂಬರ್ 18 ರಂದು ಬಂಧಿಸಲಾಗಿತ್ತು.

“ತನಿಖೆಯ ಸಮಯದಲ್ಲಿ, ಹ್ಯಾಕರ್ ಶ್ರೀಕೃಷ್ಣ ಅವರು ಮೂರು ಬಿಟ್ ಕಾಯಿನ್ ಎಕ್ಸ್ಚೇಂಜ್ ಮತ್ತು 10 ಪೋಕರ್ ಸೈಟ್ಗಳನ್ನು ಹ್ಯಾಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ವಿಷಯದಲ್ಲಿ 9 ಕೋಟಿ ರೂ. ಮೌಲ್ಯದ ಬಿಟ್ ಕಾಯಿನ್ಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಪಾಟೀಲ್ ಹೇಳಿದ್ದಾರೆ.

ಶ್ರೀಕೃಷ್ಣ ಅವರು ಹಣ ಮತ್ತು ಬಿಟ್‌ಕಾಯಿನ್‌ಗಳನ್ನು ಆನ್‌ಲೈನ್‌ನಲ್ಲಿ ಗೆಲ್ಲಲು ಆನ್‌ಲೈನ್ ಪೋಕರ್ ಆಟಗಳನ್ನು ಹ್ಯಾಕ್ ಮಾಡುತ್ತಿದ್ದ ನಿ
ಎನ್ನಲ್ಲಾಗಿದ್ದು, 2019 ರಲ್ಲಿ ಕರ್ನಾಟಕ ಸರ್ಕಾರದ ಇ-ಪ್ರೊಕ್ಯೂರ್ಮೆಂಟ್ ವೆಬ್‌ಸೈಟ್ ಅನ್ನು ಹ್ಯಾಕ್ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಪೊಲೀಸ್ ಆಯುಕ್ತ ಕಮಲ್ ಪಂತ್ ಅವರ ಪ್ರಕಾರ, ಆರೋಪಿಗಳು 2014 ರಿಂದ 2017 ರವರೆಗೆ ನೆದರ್ಲೆಂಡ್ಸ್‌ನಲ್ಲಿ ವಾಸಿಸುತ್ತಿದ್ದ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು