ಬೆಂಗಳೂರು,ಜು.9: ಬೆಂಗಳೂರಿನಲ್ಲಿ ಶುಕ್ರವಾರ 932 ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.4.97ರಷ್ಟಿದೆ. 902 ಮಂದಿ ಗುಣಮುಖರಾಗಿದ್ದಾರೆ.
ಕೊರೋನಾ ಸೋಂಕಿನಿಂದ ಯುವಕ ಕಳೆದ ಗುರುವಾರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ 16 ವರ್ಷದ ಬಾಲಕ ಮೃತಪಟ್ಟ ವರದಿಯಾಗಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಯುವಕ ಶುಕ್ರವಾರ ಮೃತಪಟ್ಟಿದ್ದಾನೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇನ್ನು ನಗರದಲ್ಲಿ ಸದ್ಯ 6,062 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಈ ಪೈಕಿ 93 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 6323 ಮಂದಿ ಕೋವಿಡ್ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ. 829 ಮಂದಿ ಮೊದಲ ಡೋಸ್, 2119 ಮಂದಿ ಎರಡನೇ ಡೋಸ್ ಮತ್ತು 3375 ಮಂದಿ ಮೂರನೇ ಡೋಸ್ ಲಸಿಕೆ ಪಡೆದಿದ್ದಾರೆ.
ನಗರದಲ್ಲಿ 17030 ಮಂದಿಗೆ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 13277 ಆರ್ಟಿಪಿಸಿಆರ್ ಹಾಗೂ 3753 ಮಂದಿಗೆ ರಾರಯಪಿಡ್ ಆಯಂಟಿಜನ್ ಪರೀಕ್ಷೆ ನಡೆಸಲಾಗಿದೆ. ಶುಕ್ರವಾರ ನಗರದಲ್ಲಿ ಹೊಸದಾಗಿ ಕಂಟೈನ್ಮೆಂಟ್ ಪ್ರದೇಶ ಸೃಷ್ಟಿಯಾಗಿಲ್ಲ. ಆರ್ಆರ್ನಗರ ವಲಯದಲ್ಲಿ ಒಂದು ಪ್ರದೇಶ ಕಂಟೈನ್ಮೆಂಟ್ನಿಂದ ಮುಕ್ತವಾಗಿದೆ. ನಗರದಲ್ಲಿ ಒಟ್ಟು 21 ಕಂಟೈನ್ಮೆಂಟ್ ಪ್ರದೇಶಗಳಿವೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.