ಬೆಂಗಳೂರು: ಹಿಂದೂಗಳ ಭಾವನೆಗೆ ಧಕ್ಕೆ ತಂದಿರುವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸತೀಶ್ ಜಾರಕಿಹೊಳಿ ಅವರು ಹಿಂದೂ ಎಂಬ ಪದ ಅಶ್ಲೀಲ ಎನ್ನುವ ಮೂಲಕ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ನೀತಿಯನ್ನು ಮತ್ತೆ ಅನಾವರಣಗೊಳಿಸಿದ್ದಾರೆ. ಈ ರೀತಿಯಾಗಿ ಹಿಂದೂಗಳನ್ನು ಟೀಕಿಸುವ ಮಾನಸಿಕತೆಯನ್ನು ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಬೆಳೆಸಿಕೊಂಡು ಬಂದಿದೆ ಎಂದರು.
ಹಿಂದೂಗಳನ್ನು ಅವಮಾನಿಸುವುದು, ಕಡೆಗಣಿಸುವುದನ್ನು ಕಾಂಗ್ರೆಸ್ ಪಕ್ಷವು ಸಾಮಾನ್ಯ ಕಾರ್ಯಸೂಚಿಯಾಗಿ ಪಾಲಿಸುತ್ತಲೇ ಬಂದಿದೆ ಎಂದು ಹೇಳಿದ್ದಾರೆ.