ಪತ್ನಿ ರಾಧಿಕಾ, ಪುತ್ರಿ ಮಾಹಿತಿ ಮುಚ್ಚಿಟ್ಟ ಆರೋಪ: ಎಚ್‌ ಡಿಕೆ ವಿರುದ್ಧದ ದೂರು ವಜಾ

ಬೆಂಗಳೂರು: ಪತ್ನಿ ರಾಧಿಕಾ, ಪುತ್ರಿ ಶಮಿಕಾ ಮಾಹಿತಿ ಮುಚ್ಚಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ವಿರುದ್ಧದ ದೂರನ್ನು ಬೆಂಗಳೂರು ಕೋರ್ಟ್ ವಜಾಗೊಳಿಸಿದೆ.

ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು ತಮ್ಮ ಉಮೇದುವಾರಿಕೆಯ ಜೊತೆ ತಪ್ಪು ಅಫಿಡವಿಟ್‌ ಸಲ್ಲಿಸಿದ್ದು, ಎರಡನೇ ಪತ್ನಿ ರಾಧಿಕಾ ಹಾಗೂ ಪುತ್ರ ನಿಖಿಲ್‌ ಕುಮಾರಸ್ವಾಮಿ ಹಾಗೂ ಪುತ್ರಿ ಶಮಿಕಾ ಅವರ ಮಾಹಿತಿ ಬಚ್ಚಿಡುವ ಮೂಲಕ ಪ್ರಮಾದ ಎಸಗಿದ್ದಾರೆ. ಹೀಗಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲು ನಿರ್ದೇಶಿಸುವಂತೆ ಕೋರಿದ್ದ ಖಾಸಗಿ ದೂರನ್ನು ಬೆಂಗಳೂರಿನ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ವಜಾ ಮಾಡಿದೆ. ಬೆಂಗಳೂರಿನ ಎಸ್‌ ಆನಂದ ಅವರು ಸಲ್ಲಿಸಿದ್ದ ಖಾಸಗಿ ದೂರನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯದ ಮ್ಯಾಜಿಸ್ಟ್ರೇಟ್‌ ಜೆ ಪ್ರೀತ್‌ ಅವರು ವಜಾ ಮಾಡಿದ್ದಾರೆ.

“ಯಾವುದೇ ದಾಖಲೆ ಸಲ್ಲಿಸದೇ ರಾಧಿಕಾ ಅವರು ಕುಮಾರಸ್ವಾಮಿ ಅವರ ಎರಡನೇ ಪತ್ನಿ ಎಂದು ದೂರುದಾರರು ಹೇಳುವುದನ್ನು ಆಧರಿಸಿ ಈ ಹಂತದಲ್ಲಿ ನ್ಯಾಯಾಲಯವು ಕುಮಾರಸ್ವಾಮಿ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಆದೇಶಿಸಲಾಗದು. ಮುಂದುವರಿದು, ಮೊದಲ ಪತ್ನಿ ಜೀವಂತವಾಗಿರಬೇಕಾದರೆ ಹಾಲಿ ಕಾನೂನಿನಲ್ಲಿ ಎರಡನೇ ಪತ್ನಿ ಪರಿಕಲ್ಪನೆಗೆ ಅವಕಾಶವಿಲ್ಲ” ಎಂದು ನ್ಯಾಯಾಲಯ ಹೇಳಿದೆ.

“ಕುಮಾರಸ್ವಾಮಿ ಅವರು ರಾಧಿಕಾ, ನಿಖಿಲ್‌ ಮತ್ತು ಶಮಿಕಾ ಅವರ ಬಗ್ಗೆ ಮಾಹಿತಿ ಬಚ್ಚಿಟ್ಟಿದ್ದಾರೆ ಎಂಬುದು ದೂರುದಾರರ ವಾದವಾಗಿದೆ. ಆದರೆ, ದೂರುದಾರರು ಅನಿತಾ ಅವರು ಕುಮಾರಸ್ವಾಮಿ ಅವರ ಪತ್ನಿ ಎಂಬುದಕ್ಕೆ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ. ಕುಮಾರಸ್ವಾಮಿ ಅವರು ಉಮೇದುವಾರಿಕೆ ಅಂದರೆ ಫಾರ್ಮ್‌ 26ರಲ್ಲಿ ಪತ್ನಿ ಕಾಲಂನಲ್ಲಿ ಅನಿತಾ ಅವರನ್ನು ಪತ್ನಿ ಎಂದು ಹೇಳಿದ್ದಾರೆ. ಆದರೆ, ರಾಧಿಕಾ ಅವರು ಕುಮಾರಸ್ವಾಮಿ ಅವರ ಪತ್ನಿ ಅಥವಾ ಎರಡನೇ ಪತ್ನಿ ಎಂದು ತೋರಿಸಲು ಯಾವುದೇ ದಾಖಲೆ ಸಲ್ಲಿಸಲಾಗಿಲ್ಲ” ಎಂದು ನ್ಯಾಯಾಲಯ ವಿವರಿಸಿದೆ.

Umesha HS

Recent Posts

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

59 seconds ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

15 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

31 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

56 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

1 hour ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

9 hours ago