ಎಲ್ಲ ಮಹಿಳೆಯರಿಗೆ ಸರಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ- ರಾಮಲಿಂಗಾ ರೆಡ್ಡಿ

ಬೆಂಗಳೂರು: ಚುನಾವಣೆಗೂ ಮುನ್ನ ಘೋಷಿಸಿದ ಉಚಿತ ಗ್ಯಾರಂಟಿಗಳನ್ನು ಸಿದ್ದರಾಮಯ್ಯ ನೇತೃತ್ವದ ಸರಕಾರ ಹಂತ ಹಂತವಾಗಿ ಜಾರಿಗೆ ತರಲು ಚಿಂತನೆ ನಡೆಸಿದೆ. ಈ ಬಗ್ಗೆ ಸಿಎಂ ಸಿದ್ದು ಚರ್ಚೆ ನಡೆಸಲು ಬುಧವಾರ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಬಿಜೆಪಿ, ಜೆಡಿಎಸ್ ಪಕ್ಷಗಳು ಈಗಾಗಲೇ ಕಾಂಗ್ರೆಸ್ ಸರಕಾರ ನುಡಿದಂತೆ ನಡೆದುಕೊಳ್ಳದಿದ್ದರೆ ಪ್ರತಿಭಟನೆಯ ಬಿಸಿ ಮುಟ್ಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಬೆನ್ನಲ್ಲೇ ಸರಕಾರ ಹಂತ-ಹಂತವಾಗಿ ಯೋಜನೆಯನ್ನು ಜಾರಿಗೆ ತರುವುದಕ್ಕೆ ಪ್ರಯತ್ನ ಪಡುತ್ತಿದೆ ಎಂದು ಮೂಲಗಳು ತಿಳಿಸಿವೆ.

ಯಾವೆಲ್ಲ ಮಹಿಳೆಯರಿಗೆ ಸಿಗುತ್ತೆ ಸಿದ್ದು ಸರಕಾರದ ಉಚಿತ ಬಸ್ ಪಾಸ್..?

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಎಪಿಎಲ್ ಅಥವಾ ಬಿಪಿಲ್ ನಡಿ ಇರುವವರು ಎಂಬುದಾಗಿ ಹೇಳಿಲ್ಲ. ಹಾಗಾಗಿ ಎಲ್ಲ ಮಹಿಳೆಯರು ಸರಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಇದನ್ನು ಸ್ವತಃ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ರು.2000 ಸಿಗುವುದು ಅತ್ತೆಗೋ ಸೊಸೆಗೋ..?

ಗೃಹ ಲಕ್ಷ್ಮೀ ಯೋಜನೆಯಡಿ ಮಾಸಿಕ ರು.2000 ಸಿಗುವುದು ಯಾರಿಗೆ ಅನ್ನುವುದು ಎಲ್ಲರ ಪ್ರಶ್ನೆಯಾಗಿದೆ. ಒಂದೇ ಮನೆಯಲ್ಲಿ ಅತ್ತೆ-ಸೊಸೆ ಇಬ್ಬರು ಇದ್ದರೆ ಅವರಲ್ಲಿ ಯಾರಿಗೆ ಸಿಗುತ್ತದೆ ಎನ್ನುವುದರ ಬಗ್ಗೆ ಗೊಂದಲವಿದೆ. ಈ ಬಗ್ಗೆ ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹ ಲಕ್ಷ್ಮೀ ಯೋಜನೆಯಡಿ ಮಾಸಿಕ ರು.2000 ನೀಡಲು ಮೊದಲು ಅತ್ತೆಗೆ ಮೊದಲ ಆದ್ಯತೆ ನೀಡಲಾಗುವುದು. ಇಲ್ಲದಿದ್ದರೆ ಅತ್ತೆ ಒಪ್ಪಿಗೆ ನೀಡಿದಲ್ಲಿ ಸೊಸೆಗೆ ಗೌರವಧನ ನೀಡಲಾಗುವುದು ಎಂದು ಸಚಿವೆ ತಿಳಿಸಿದ್ದಾರೆ.

 

Gayathri SG

Recent Posts

ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಅರವಿಂದರ್ ಸಿಂಗ್ ಲವ್ಲಿ

ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ್ದ ಅರವಿಂದರ್ ಸಿಂಗ್ ಲವ್ಲಿ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

14 mins ago

ಕಾರು ಬೈಕಿನ ನಡುವೆ ಅಪಘಾತ; ಸವಾರ ಮೃತ್ಯು

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತಿಬ್ಬರಿಗೆ ಪೆಟ್ಟಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ…

20 mins ago

ಪರಶುರಾಮ ಮೂರ್ತಿಯ ಕಾಮಗಾರಿ ನಡೆಸಲು ಕಾಂಗ್ರೆಸ್ ಅಡ್ಡಿ: ನವೀನ್‌  ನಾಯಕ್

ಪರಶುರಾಮ ಮೂರ್ತಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಕಾಮಗಾರಿ ನಡೆಸಲು ಹೈಕೋರ್ಟ್ ಅನುಮತಿ ನೀಡಿದ್ದು, ಕಾಮಗಾರಿ ಆರಂಭಕ್ಕೆ ಜಿಲ್ಲಾಡಳಿತ ತಡೆಯೊಡ್ಡುವ ಮೂಲಕ ಪರೋಕ್ಷವಾಗಿ…

40 mins ago

ಬಂಡೀಪುರ ಅರಣ್ಯ ಪ್ರದೇಶದಲ್ಲಿ ಹುಲಿ ಮೃತದೇಹ ಪತ್ತೆ

ಗಂಡು ಹುಲಿಯೊಂದರ ಮೃತದೇಹ  ಬಂಡೀಪುರ ಹುಲಿ ಸಂರಕ್ಷಿತ  ಪ್ರದೇಶದ  ಮೈಸೂರು ಜಿಲ್ಲೆಯ  ಹೆಡಿಯಾಲ ಉಪ-ವಿಭಾಗದ ಹೆಬ್ಬಳ್ಳ ಗಸ್ತಿನ ಚಾಮಲಾಪುರ ಕಟ್ಟೆಯ ಅರಣ್ಯ ಪ್ರದೇಶದಲ್ಲಿ  ಪತ್ತೆಯಾಗಿದ್ದು, ವಯೋಸಹಜವಾಗಿ…

46 mins ago

15 ವರ್ಷದಿಂದ ಸಂಸದ ರಾಘವೇಂದ್ರ ಗೆದ್ದು ಏನು ಕಡೆದು ಕಟ್ಟೆಹಾಕಿದ್ದಾರೆ: ಪ್ರದೀಪ್ ಈಶ್ವರ್

ಕಳೆದ 15 ವರ್ಷದಿಂದ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸಂಸದ ರಾಘವೇಂದ್ರ ಗೆದ್ದು ಏನು ಕಡೆದು ಕಟ್ಟೆಹಾಕಿದ್ದಾರೆ ಎಂದು ಚಿಕ್ಕಬಳ್ಳಾಪುರದ ಶಾಸಕ…

50 mins ago

ವರುಣನ ಆರ್ಭಟಕ್ಕೆ ಬೆಳೆ ನಷ್ಟ : ಬಿರುಗಾಳಿ ಮಳೆಗೆ ನೆಲಕಚ್ಚಿದ 8 ಎಕರೆ ಬಾಳೆ ಬೆಳೆ

ವರುಣ ಕ್ಷೇತ್ರದಲ್ಲಿ ವರುಣನ ಆರ್ಭಟಕ್ಕೆ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಸುಮಾರು ಎಂಟು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆಗೊನೆ…

1 hour ago