News Karnataka Kannada
Tuesday, May 14 2024
ಬೆಂಗಳೂರು ನಗರ

ಬೆಂಗಳೂರು : ಜನವರಿ 27ರಂದು ಹುಬ್ಬಳ್ಳಿಗೆ ಅಮಿತ್‌ ಶಾ ಆಗಮನ!

Amit Shah to visit Delhi Police Headquarters today
Photo Credit : By Author

ಬೆಂಗಳೂರು: ಎಲ್ಲಾ ರಾಜಕೀಯ ಪಕ್ಷಗಳು ಗೆಲುವಿಗಾಗಿ ಭರ್ಜರಿ ತಯಾರಿ ನಡೆಸುತ್ತಿದೆ. ಇದೀಗ ಗೃಹಸಚಿವ ಅಮಿತ್‌ ಶಾ ಎರಡು ದಿನದ ಕರ್ನಾಟಕ ಪ್ರವಾಸಕ್ಕೆ ಶನಿವಾರ ಆಗಮಿಸಲಿದ್ದಾರೆ.

ಅಮಿತ್ ಶಾ ಅವರು ಇದೇ ಜನವರಿ 27ರಂದು ರಾತ್ರಿ ಹುಬ್ಬಳ್ಳಿಗೆ ಆಗಮಿಸಿ ವಾಸ್ತವ್ಯ ಇರುತ್ತಾರೆ. 28ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅಮಿತ್ ಶಾ , 28ರಂದು ಬೆಳಿಗ್ಗೆ ಹುಬ್ಬಳ್ಳಿಯ ಕೆ.ಎಲ್.ಇ. ಸೊಸೈಟಿಯ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಒಳಾಂಗಣ ಸ್ಟೇಡಿಯಂ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಹುಬ್ಬಳ್ಳಿ ಬಿವಿಬಿ ಕಾಲೇಜಿನ ಮೈದಾನದಲ್ಲಿ ಕೆಎಲ್‍ಇ ಸೊಸೈಟಿಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಧಾರವಾಡದ ನ್ಯಾಷನಲ್ ಫಾರೆನ್ಸಿಕ್ ಸೈನ್ಸ್ ಸೆಂಟರ್‍ನ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ .

ಇದೇ ವೇಳೆ ಕುಂದಗೋಳದಲ್ಲಿ 300 ವರ್ಷಗಳ ಹಿಂದೆ ನಿರ್ಮಿಸಿದ ಪುರಾತನ ಶಂಭುಲಿಂಗ ದೇವಸ್ಥಾನಕ್ಕೆ ಮಧ್ಯಾಹ್ನ ಭೇಟಿ ಕೊಟ್ಟು ಪೂಜೆ ಸಲ್ಲಿಸುವರು. ನಂತರ ಬಸವಣ್ಣ ದೇವರ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಕುಂದಗೋಳದ ವಾರ್ಡ್ ನಂಬರ್ 7ರ ಬೂತ್ ಸಂಖ್ಯೆ 50ರಲ್ಲಿ ವಾಲ್ ಪೇಂಟಿಂಗ್ ಮಾಡುವ ಮೂಲಕ ವಿಜಯ ಸಂಕಲ್ಪ ಅಭಿಯಾನದಲ್ಲಿ ಭಾಗವಹಿಸುವರು. ಬಳಿಕ ಬಹುದೊಡ್ಡ ರೋಡ್ ಷೋದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ ಬೆಳಗಾವಿಯ ಕಿತ್ತೂರು ಕ್ಷೇತ್ರದ ವೀರ ಸೋಮೇಶ್ವರ ರಂಭಾಪುರಿ ಕಲ್ಯಾಣ ಮಂಟಪದ ಬಳಿಯ ಮೈದಾನದಲ್ಲಿ ಜನಸಂಕಲ್ಪ ಯಾತ್ರೆಯ ಸಾರ್ವಜನಿಕ ಸಭೆಯಲ್ಲಿ ಮಾತನಾಡುವರು. ಬೆಳಗಾವಿಯಲ್ಲಿ ಹಿರಿಯರ ಜೊತೆ ಸಂವಾದ ನಡೆಸುವರು. ಅಲ್ಲದೆ, ಸಂಘಟನಾತ್ಮಕ ಸಭೆಯಲ್ಲೂ ಭಾಗವಹಿಸುವರು. ಬಸವರಾಜ ಬೊಮ್ಮಾಯಿ, ನಳಿನ್‍ಕುಮಾರ್ ಕಟೀಲ್, ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತಿತರ ಮುಖಂಡರು ಪಕ್ಷದ ವಿವಿಧ ಸಭೆಗಳಲ್ಲಿ ಭಾಗವಹಿಸಲಿದ್ದಾರೆ .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು