ರಾಜಧಾನಿಯಲ್ಲಿ ಕಂಬಳದ ಮೆರುಗು, ಉದ್ಘಾಟನೆಗೆ ಬರ್ತಿದ್ದಾರೆ ಅನುಷ್ಕಾ ಶೆಟ್ಟಿ

ಬೆಂಗಳೂರು: ಕರಾವಳಿಯ ಹೆಮ್ಮೆಯ ಜನಪದ ಕ್ರೀಡೆ ಕಂಬಳವನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಸಲು ಸಕಲ ಸಿದ್ದತೆ ನಡೆದಿದೆ. ಈ ವರ್ಷ ತುಳು ಕೂಟಕ್ಕೆ 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ‌ ಕಂಬಳ‌ ಮಾಡಲು ಸಿದ್ಧತೆ ಭರದಿಂದ ನಡೆಯುತ್ತಿದೆ.

ಕರಾವಳಿ ಭಾಗದ ಸಾಂಪ್ರದಾಯಿಕ ಆಟ ಕಂಬಳ ಈ ವರ್ಷ ಮೊಟ್ಟ ಮೊದಲ ಬಾರಿಗೆ ರಾಜ್ಯ ರಾಜಧಾನಿಯಲ್ಲಿ ನಡೆಯುತ್ತಿದೆ ಅನ್ನೋದು ವಿಶೇಷ..!ಬೆಂಗಳೂರಿನಲ್ಲಿ ನವೆಂಬರ್ 24, 25, 26ಕ್ಕೆ ಒಟ್ಟು ಮೂರು ದಿನಗಳ ಕಾಲ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.ಇದೀಗ ಅದ್ದೂರಿ ಬೆಂಗಳೂರಿನ ಕಂಬಳಕ್ಕೆ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಅವರು ಬರಲಿದ್ದಾರೆ ಎನ್ನಲಾಗುತ್ತಿದೆ.

ಹೌದು, ತುಳು ಕೂಟಕ್ಕೆ 50 ವರ್ಷ ತುಂಬಿರುವ ಹಿನ್ನೆಲೆ ಮೊಟ್ಟ ಮೊದಲು ಬಾರಿಗೆ ರಾಜಧಾನಿಯಲ್ಲಿ ಕಂಬಳವನ್ನ ಮಾಡಲು ತುಳುಕೂಟ ನಿರ್ಧರಿಸಿದೆ. ಸದ್ಯ ಈ‌ ಕಂಬಳವನ್ನ ಪ್ಯಾಲೇಸ್ ಗ್ರೌಂಡ್ ನಲ್ಲಿ ಮಾಡಲು ಜಾಗ ಗುರುತಿಸಿದ್ದು, ಈಗಾಗಲೇ ಮೈಸೂರ್ ಒಡೆಯರ್ ಜೊತೆಗೂ ಒಪ್ಪಿಗೆ ಪಡೆದುಕೊಂಡಿದ್ದಾರೆ. ಇನ್ನು ನವೆಂಬರ್ ತಿಂಗಳ 24, 25, 26 ನೇ ತಾರೀಖಿನಂದು ಕಂಬಳ ನಡೆಸಲು ದಿನಾಂಕ ನಿಗದಿ ಮಾಡಿದ್ದು, ಕಂಬಳಕ್ಕೆ 150 ಜೋಡಿಯ ಕೋಣಗಳು ಬರಲಿವೆಯಂತೆ. ಇನ್ನು ಈ ಮೂರು ದಿನಗಳ ಕಾಲ ಈ ಕಂಬಳ ನಡೆಯಲಿದ್ದು, ಅಂದಾಜು 5 ಲಕ್ಷಕ್ಕು ಅಧಿಕ ಜನರು ಬರುವ ಸಾಧ್ಯತೆ ಇದೆ. ಹೀಗಾಗಿ ಇದಕ್ಕೆ ತುಳುನಾಡಿನ ಬೆಡಗಿ ಅನುಷ್ಕಾ ಶೆಟ್ಟಿ ಆಗಮಿಸುವ ಎಲ್ಲಾ ನಿರೀಕ್ಷೆಗಳು ಇವೆ.

ಕಂಬಳಕ್ಕೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಅನುಷ್ಕಾ ಶೆಟ್ಟಿ, ಸೇರಿದಂತೆ ಹಲವರು ಬರುವ ಸಾಧ್ಯತೆ ಇದ್ದು, ಕಂಬಳಕ್ಕೆ ಬರುವ ಕೋಣಗಳನ್ನ ವಾಹನಗಳಲ್ಲಿ ತರಿಸುವ ವ್ಯವಸ್ಥೆ ಬಗ್ಗೆ ಚರ್ಚೆಗಳು ನಡಿತಿವೆ. ಸಕಲೇಶಪುರ, ಹಾಸನ, ನೆಲಮಂಗಲ ಮೂರು ಕಡೆ ಕೋಣಗಳಿಗೆ ವಿಶ್ರಾಂತಿಗೆ ಅವಕಾಶ ಕಲ್ಪಿಸಲಾಗುವುದು ಎಂಬ ಮಾಹಿತಿ ಲಭ್ಯವಾಗಿವೆ.

Gayathri SG

Recent Posts

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

5 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

11 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

23 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

34 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

54 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

1 hour ago