ಬೆಂಗಳೂರು: ಇಂದು ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ಮಂಗಳೂರಿನ ಬಿಜೆಪಿ ಲೋಕಸಭಾ ಚುನಾವಣಾ ಕಚೇರಿಯಲ್ಲಿ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ನಿನ್ನೆ (ಮಾ. 14)ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಮಾತುಕತೆ ಬಳಿಕ ಬಿಜೆಪಿ ಸೇರ್ಪಡೆಗೆ ನಿರ್ಧಾರ ಮಾಡಲಾಗಿದೆ.
ಬಿಜೆಪಿ ಕಚೇರಿಯಲ್ಲಿ ನಡೆದ ಮಾತುಕತೆ ಬಳಿಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನೂ ಭೇಟಿ ಮಾಡಿದ್ದರು.