ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಆರೋಪದಲ್ಲಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿರುವ ಅನುಮತಿಯನ್ನು ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು ಈ ಬಗ್ಗೆ ಸಚಿವ ಹೆಚ್ ಕೆ ಪಾಟೀಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಡಿಕೆ ಶಿವಕುಮಾರ್ ಪ್ರಕರಣದ ಸಂಬಂಧ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಡ್ವೊಕೇಟ್ ಜನರರಲ್ ಆಗಿದ್ದ ಪ್ರಭುಲಿಂಗ ನಾವಡಗಿ ವರದಿ ಆಧರಿಸಿ ಹಾಲಿ ಅಡ್ವೊಕೇಟ್ ಜನರಲ್ ಅವರಿಂದ ಅಭಿಪ್ರಾಯ ಪಡೆಯಲಾಗಿತ್ತು. ಈ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. ಹಾಲಿ ಎಜಿ ಜನರಲ್ ಶಶಿಕಿರಣ್ ಶೆಟ್ಟಿ ಅಭಿಪ್ರಾಯ ಪರಿಗಣಿಸಿ, ಸರ್ಕಾರ ಅನುಮತಿ ವಾಪಸ್ ಪಡೆಯಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.
ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ( ಪ್ರಕರಣ ವಾಪಸ್ ಪ್ರಸ್ತಾವನೆ ವಿಚಾರ ‘ಪ್ರಕರಣ ಕೋರ್ಟ್ನಲ್ಲಿದೆ, ಇದು ಕಾನೂನಿಗೆ ವಿರುದ್ಧವಾದುದು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಬೆಂಗಳೂರಿ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಸಿಬಿಐ ತನಿಖೆಗೆ ನೀಡಿರುವುದು ತಪ್ಪು ಎಂದು ಅಪೀಲು ಹೋಗಿದ್ದರು. ಕೋರ್ಟ್ನಿಂದ ತೀರ್ಪು ಬರುವ ಮೊದಲು ನಿರ್ಧಾರ ಸರಿಯಲ್ಲ. ಸರ್ಕಾರ ಬದಲಾದಾಗ ಎಲ್ಲರೂ ಹಾಗೆ ಮಾಡುತ್ತಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.