ಕೋರ್ಟ್‌ ತೀರ್ಪಿಗೂ ಮೊದಲೇ ನಿರ್ಧಾರ ಸರಿಯಲ್ಲ: ಸಿಬಿಐ ಕೇಸ್‌ ವಾಪಸ್‌ ಕುರಿತು ಅಶೋಕ್‌ ಪ್ರತಿಕ್ರಿಯೆ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಆರೋಪದಲ್ಲಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿರುವ ಅನುಮತಿಯನ್ನು ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು ಈ ಬಗ್ಗೆ ಸಚಿವ ಹೆಚ್ ಕೆ ಪಾಟೀಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಡಿಕೆ ಶಿವಕುಮಾರ್ ಪ್ರಕರಣದ ಸಂಬಂಧ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಡ್ವೊಕೇಟ್ ಜನರರಲ್ ಆಗಿದ್ದ ಪ್ರಭುಲಿಂಗ ನಾವಡಗಿ ವರದಿ ಆಧರಿಸಿ ಹಾಲಿ ಅಡ್ವೊಕೇಟ್ ಜನರಲ್ ಅವರಿಂದ ಅಭಿಪ್ರಾಯ ಪಡೆಯಲಾಗಿತ್ತು. ಈ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. ಹಾಲಿ ಎಜಿ ಜನರಲ್ ಶಶಿಕಿರಣ್ ಶೆಟ್ಟಿ ಅಭಿಪ್ರಾಯ ಪರಿಗಣಿಸಿ, ಸರ್ಕಾರ ಅನುಮತಿ ವಾಪಸ್ ಪಡೆಯಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ( ಪ್ರಕರಣ ವಾಪಸ್ ಪ್ರಸ್ತಾವನೆ ವಿಚಾರ ‘ಪ್ರಕರಣ ಕೋರ್ಟ್​ನಲ್ಲಿದೆ, ಇದು ಕಾನೂನಿಗೆ ವಿರುದ್ಧವಾದುದು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಬೆಂಗಳೂರಿ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಸಿಬಿಐ ತನಿಖೆಗೆ ನೀಡಿರುವುದು ತಪ್ಪು ಎಂದು ಅಪೀಲು ಹೋಗಿದ್ದರು. ಕೋರ್ಟ್​ನಿಂದ ತೀರ್ಪು ಬರುವ ಮೊದಲು ನಿರ್ಧಾರ ಸರಿಯಲ್ಲ. ಸರ್ಕಾರ ಬದಲಾದಾಗ ಎಲ್ಲರೂ ಹಾಗೆ ಮಾಡುತ್ತಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

Gayathri SG

Recent Posts

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

6 mins ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

25 mins ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

38 mins ago

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

48 mins ago

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

9 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

9 hours ago