ಬೆಂಗಳೂರು ನಗರ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರ ಪದಗ್ರಹಣವಾಗಿದೆ. ಬಿಜೆಪಿ ಕಚೇರಿಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು ವಿಜಯೇಂದ್ರ ಅವರಿಗೆ ಬಿಜೆಪಿ ಬಾವುಟ ನೀಡುವ ಮೂಲಕ ಅಧಿಕಾರವನ್ನು ಹಸ್ತಾಂತರ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾರ ಅವರನ್ನು ಕರೆಸಿ, ಒಂದು ಲಕ್ಷ ಜನರನ್ನು ಸೇರಿಸಿ ದೊಡ್ಡ ಸಮಾವೇಶ ಮಾಡುವ ಚಿಂತನೆ ಮಾಡಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹೇಳಿದರು.

ಇನ್ನು ಚುನಾವಣೆಯಲ್ಲಿ ಗೆಲ್ಲುವವರೆಗೆ ಮಾತ್ರ ಬಿಜೆಪಿ ಕಾರ್ಯಕರ್ತ, ಗೆದ್ದ ಬಳಿಕ ನಾನು ಆ ಜಾತಿ, ನಾನು ಈ ಜಾತಿ ಎಂಬ ಮನೋಭಾವನೆ ಬಿಟ್ಟು ಬಿಜೆಪಿ ಕಾರ್ಯಕರ್ತ ಅಂತ ಕೆಲಸ ಮಾಡಿದರೇ ನಿಶ್ಚಿತವಾಗಿ ಲೋಕಸಭಾ ಚುನಾವಣೆ ಮತ್ತು ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಗೆಲ್ಲುವುದು ನಿಶ್ಚಿತ ಎಂದು ಬಿಜೆಪಿ ನೂತನ ಅಧ್ಯಕ್ಷ ಬಿವೈ ವಿಜಯೇಂದ್ರ ಅವರು ಕರೆಕೊಟ್ಟರು. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಉತ್ತರ ಕೊಡಬೇಕಾಗಿದೆ. ಜಿಲ್ಲಾ ಪಂಚಾಯತ್​, ತಾಲೂಕು ಪಂಚಾಯತ್​ ಚುನಾವಣೆಯನ್ನೂ ನಾವು ಮರೆಯಬಾರದು.

ಲೋಕಸಭಾ ಚುನಾವಣೆ ಅಂತಾ ಭಯ ಬೇಡ. ನಾವೇನೂ ಆಪರೇಷನ್ ಕಮಲ ಮಾಡುತ್ತಿಲ್ಲ ಎಂದರು. ಇನ್ನು ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಆರ್ ಅಶೋಕ, ಗೋವಿಂದ ಕಾರಜೋಳ, ಮುನಿರತ್ನ ನಾಯ್ಡು, ಆರಗ ಜ್ಞಾನೇಂದ್ರ, ಶ್ರೀರಾಮುಲು, ಗೋಪಾಲಯ್ಯ, ಪ್ರಭು ಚೌಹಾಣ್, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಮೊದಲಾದವರು ಭಾಗಿಯಾಗಿದ್ದರು.

Gayathri SG

Recent Posts

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

17 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

25 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

26 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

35 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

50 mins ago

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

1 hour ago