ಸಾರಿಗೆ ಇಲಾಖೆ ನೌಕರರಿಗೆ ರಾಜ್ಯ ಸರ್ಕಾರದಿಂದ ಕಹಿ ಸುದ್ದಿ

ಬೆಂಗಳೂರು: ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸಾರಿಗೆ ಇಲಾಖೆ ನೌಕರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ವೇತನ ಪರಿಷ್ಕರಣೆ ಮನವಿಯನ್ನು ರಾಜ್ಯ ಸರ್ಕಾರವು ತಿರಸ್ಕರಿಸಿದೆ. ಸಾರಿಗೆ ನಿಗಮಗಳ ವೇತನ ಪರಿಷ್ಕರಣೆಯ ಹೆಚ್ಚುವರಿ ವೆಚ್ಚಕ್ಕೆ ವಿಶೇಷ ಅನುದಾನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸಾರಿಗೆ ಇಲಾಖೆ ಎಲ್ಲಾ ನಿಗಮಗಳು ಮನವಿ ಮಾಡಿಕೊಂಡಿದ್ದವು.

ಆದರೆ ಸಾರಿಗೆ ನಿಗಮಗಳ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ. ವೇತನ ಪಾವತಿ- ಇಂಧನ ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ ಒದಗಿಸಲು ಅವಕಾಶ ಇಲ್ಲ. ಸಾರಿಗೆ ನಿಗಮಗಳು ತಮ್ಮ ಆಂತರಿಕ ಸಂಪನ್ಮೂಲಗಳಿಂದಲೇ ಭರಿಸಿಕೊಳ್ಳುವಂತೆ ಸೂಚನೆ ನೀಡಿದೆ.

ಹಿಂದಿನ ಬಿಜೆಪಿ ಸರ್ಕಾರ ಸಾರಿಗೆ ನೌಕರರಿಗೆ 15% ವೇತನ ಪರಿಷ್ಕರಣೆ ‌ಮಾಡಿತ್ತು. ಆ ಹೆಚ್ಚುವರಿ ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸುತ್ತಿತ್ತು. ಆದರೆ ನೂತನ ಕಾಂಗ್ರೆಸ್ ಸರ್ಕಾರ ಇನ್ಮುಂದೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳಿಗೆ ಅನುದಾನ ನೀಡುವುದಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಈ ಆದೇಶದಿಂದ ಸಾರಿಗೆ ನಿಗಮಗಳಿಗೆ ಬಿಗ್ ಶಾಕ್ ಆಗಿದೆ.

Ashitha S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

5 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

5 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

6 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

6 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

6 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

7 hours ago