News Karnataka Kannada
Thursday, April 18 2024
Cricket
ಬೆಂಗಳೂರು ನಗರ

ಪ್ರೇಮಿಗಳ ದಿನದಂದು ಬೆಂಗಳೂರಿನ ಹಲವೆಡೆ ಮದ್ಯ ಮಾರಾಟ ನಿಷೇಧ

ಫೆ.14ರ ಪ್ರೇಮಿಗಳ ದಿನದಂದು ಸಂಜೆ 5ರಿಂದ ಫೆಬ್ರವರಿ 17ರ ಬೆಳಿಗ್ಗೆ 6 ಗಂಟೆವರೆಗೆ ನಗರದ ಕೆಲವು ಭಾಗಗಳಲ್ಲಿ (ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಪ್ರದೇಶಗಳನ್ನು ಹೊರತುಪಡಿಸಿ) ಉಳಿದ ಕಡೆ ಮದ್ಯ ಮಾರಾಟವನ್ನು ನಿಷೇಧ ಮಾಡಲಾಗಿದೆ.
Photo Credit : News Kannada

ಬೆಂಗಳೂರು: ಫೆ.14ರ ಪ್ರೇಮಿಗಳ ದಿನದಂದು ಸಂಜೆ 5ರಿಂದ ಫೆಬ್ರವರಿ 17ರ ಬೆಳಿಗ್ಗೆ 6 ಗಂಟೆವರೆಗೆ ನಗರದ ಕೆಲವು ಭಾಗಗಳಲ್ಲಿ (ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಪ್ರದೇಶಗಳನ್ನು ಹೊರತುಪಡಿಸಿ) ಉಳಿದ ಕಡೆ ಮದ್ಯ ಮಾರಾಟವನ್ನು ನಿಷೇಧ ಮಾಡಲಾಗಿದೆ.

ಫೆ.16 ರಂದು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ವಿಧಾನ ಪರಿಷತ್ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 135(ಸಿ) ಅಡಿಯಲ್ಲಿ ಮತ್ತು ಕರ್ನಾಟಕ ಅಬಕಾರಿ ನಿಯಮ 1967ರ 10 (ಬಿ)ಯನ್ನು ಪರಿಗಣನೆಗೆ ತೆಗೆದುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಉಪ ಆಯುಕ್ತ ಕೆ.ಎ.ದಯಾನಂದ ಅವರು ನಿಷೇಧವನ್ನು ಘೋಷಿಸಲಾಗಿದೆ ಎಂದು ತಿಳಿಸಿದರು.

ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹದೇವಪುರ, ಬೆಂಗಳೂರು ದಕ್ಷಿಣ ಮತ್ತು ಆನೇಕಲ್ ಶಿಕ್ಷಕರು ಮತದಾನ ಮಾಡಲಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಫೆ.23ರವರೆಗೆ ಮುಂದುವರಿಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು