ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ವೇಳೆ ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದಾರೆ. ಪ್ರಕರಣವೊಂದರ ಸಂಬಂಧ ಬೆಂಗಳೂರಿಗೆ ಭೇಟಿ ನೀಡಿದ್ದ ಎನ್ಐಎ, ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ಮಾಡಿದೆ.
ಈ ವೇಳೆ ಬಾಂಗ್ಲಾದ ಮೂವರು ಪ್ರಜೆಗಳು ಅಕ್ರಮವಾಗಿ ನೆಲೆಸಿರುವುದು ಮಾಹಿತಿ ಪತ್ತೆಯಾಗಿದೆ. ಅಕ್ರಮ ಬಾಂಗ್ಲಾ ವಲಸಿಗರಾದ ಖಲೀಲ್ ಚಪರಾಸಿ, ಅಬ್ದುಲ್ ಖಾದಿರ್, ಮೊಹಮ್ಮದ್ ಜಾಹಿದ್ ಎನ್ನುವವರನ್ನು ಎನ್ಐಎ ಅಧಿಕಾರಿಗಳು ಹಿಡಿದು ಬೆಳ್ಳಂದೂರು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ಈ ಸಂಬಂಧ ಬೆಳ್ಳಂದೂರು ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ವಿಚಾರಣೆಗೊಳಪಸಿಡಿದ್ದಾರೆ.