ಬೆಳ್ತಂಗಡಿ: ಬಸ್ ನಿಲ್ದಾಣ ಅಭಿವೃದ್ಧಿಗೆ 12 ಕೋಟಿ ರೂ. ಬಿಡುಗಡೆ

ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು, ಇದೀಗ ಬಸ್ ನಿಲ್ದಾಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರವರ ಮುತುವರ್ಜಿಯಿಂದ 12 ಕೋಟಿ ರೂ. ರಾಜ್ಯ ಸರಕಾರ ಬಿಡುಗಡೆಗೊಳಿಸಿದೆ. ಹಲವಾರು ವರ್ಷಗಳ ಬೇಡಿಕೆ ಇದಾಗಿದ್ದು, ನಗರ ಸೌಂದರ್ಯಕ್ಕ ಮೆರುಗು ತರಲಿದೆ.

ಈಗಾಗಲೆ ಟ್ರೀ ಪಾರ್ಕ್, ಸುಸಜ್ಜಿತ ಗ್ರಂಥಾಲಯ ನಿರ್ಮಾಣವಾಗುತ್ತಿದ್ದು ನಗರ ಪಂಚಾಯತ್ ವತಿಯಿಂದಲೂ ವಿವಿಧ ಸೌಂದರ್ಯ ಕಾರ್ಯ ನಡೆಯುತ್ತಿವೆ. ಬೆಳ್ತಂಗಡಿ ಬಸ್ ನಿಲ್ದಾಣಕ್ಜೆ ಕಂದಾಯ, ನಗರ ಸಬೆ, ಅರಣ್ಯ ಇಲಾಖೆಯ ಜಮೀನು ಸಾರಿಗೆ ಇಲಾಖೆಗೆ ಹಸ್ತಾಂತರ ಅಗಿರುವುದು ರಾಜ್ಯದ ಇತಿಹಾಸದಲ್ಲೆ ಪ್ರಥಮ ಶಾಸಕ ಹರೀಶ್ ಪೂಂಜಾರವರು ಮುಖ್ಯ ಮಂತ್ರಿಗಳ, ಎಲ್ಲಾ ಸಚಿವರುಗಳ ವಿಶ್ವಾಸ ಪಡೆದು ಬೆಂಗಳೂರಲ್ಲಿ ಸಚಿವರುಗಳ ಹಾಗೂ ಎಲ್ಲಾ ಅಧಿಕಾರಿಗಳ ಸಭೆ ಕರೆದ ಫಲವಾಗಿ ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ 1.20 ಎಕರೆ ನಿವೇಶನ ಮಂಜೂರಾಗಿ ಇದೀಗ 12 ಕೋಟಿ ರೂ. ಅನುದಾನ ಬಿಡುಗಡೆ ಭಾಗ್ಯ ಬಂದಿದೆ.

ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಅನುಕೂಲ

ಸರಿಯಾಗ ಬಸ್ ತಂಗುದಾಣ ಇಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದರು. ತಾಲೂಕು ಕೇಂದ್ರ ವಾದ ಕಾರಣ ನೂರಾರು ವಿದ್ಯಾರ್ಥಿಗಳು ಕುಳಿತುಕೊಳ್ಳಲು ಸಾದ್ಯವಾಗದೆ ಮಳೆ, ಗಾಳಿ, ಬಿಸಿಲಿಗೆ ಸಂಕಷ್ಟ ಎದುರಿಸುತ್ತಿದ್ದರು. ಸಾರ್ವಜನಿಕರು ಇದೇ ಸಮಸ್ಯೆ ಎದುರಿಸುತ್ತಿದ್ದರು. ಇನ್ನು ಮುಂದೆ ಯಾವುದೇ ತೊಂದರೆ ಆಗಲಾರದು.

ಕೆ. ಎಸ್. ಅರ್. ಟಿ. ಸಿ. ಇಲಾಖೆ ಸುಪರ್ದಿಗೆ ಕೆ. ಎಸ್.ಆರ್. ಟಿ .ಸಿ . ‌‌‌‌ ಬಸ್ ನಿಲ್ದಾಣಕ್ಕೆ ವಿಷೇಶ ಅನುದಾನ ಬಿಡುಗಡೆಗೊಳಿಸಿದ್ದು ಸುಂದರ ಕಟ್ಟಡ ನಿರ್ಮಾಣವಾಗಲಿದೆ. ಕೆ. ಎಸ್. ಅರ್. ಟಿ. ಸಿ.ಗೆ ಕೋಣೆ, ಕಂದಾಯ ಅಧಿಕಾರಿಗಳ ಕಚೇರಿ, ವಾಣಿಜ್ಯ ಮಳಿಗೆಗಳು ನಿರ್ಮಾಣವಾಗಲಿದ್ದು ವಿಶಾಲವಾದ ಬಸ್ ನಿಲ್ದಾಣ ನಗರಕ್ಕೆ ಆಕರ್ಷಣೆಯಾಗಲಿದೆ.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

38 mins ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

56 mins ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

1 hour ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

2 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

2 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

2 hours ago