News Karnataka Kannada
Friday, May 03 2024
ಬೆಂಗಳೂರು ನಗರ

ಬೆಂಗಳೂರು: ದೀಪಾವಳಿಗೆ 1500 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ

Ksrtc
Photo Credit : By Author

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ನಿಗಮವು ಅಕ್ಟೋಬರ್ 24 ರಂದು ನರಕ ಚತುರ್ದಶಿ ಹಾಗೂ ಅಕ್ಟೋಬರ್ 26 ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 21 ರಿಂದ ಕ್ಟೋಬರ್ 23 ರವರೆಗೆ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 1500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ.

ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಅಕ್ಟೋಬರ್ 26 ರಿಂದ ಅಕ್ಟೋಬರ್ 30 ವರೆಗೆ ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಇ-ಟಿಕೇಟ್ ಬುಕಿಂಗ್‍ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 691 ಗಣಕೀಕೃತ ಬುಕ್ಕಿಂಗ್ ಕೌಂಟರ್‍ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವÀ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಲಾಗಿದೆ. ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಗೆ ತೆರಳಲಿದೆ.

ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.

ಬೆಂಗಳೂರು ನಗರದ ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ, ಪಿಕ್‍ಅಪ್ ಪಾಯಿಂಟ್‍ನ ಹೆಸರನ್ನು ಗಮನಿಸಬೇಕು. ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‍ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.

ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ಪಟ್ಟಿಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‍ಜಾಲ ವ್ಯವಸ್ಥೆಯಲ್ಲಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವೆಬ್‍ಸೈಟ್‍ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.

ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು, ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳು ಸಂಚರಿಸಲಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು