News Karnataka Kannada
Friday, May 10 2024
ಬೆಂಗಳೂರು ನಗರ

ಬೆಂಗಳೂರು: ರಾಜ್ಯದಲ್ಲಿ ಇಂದು 639 ಮಂದಿಗೆ ಕೊರೋನ ಸೋಂಕು ದೃಢ

1,946 people tested positive for coronavirus in the last 24 hours in the country.
Photo Credit : Pexels

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 639 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,51,554ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾದಿಂದ ಇಂದು ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40201ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 281 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1864530ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 967 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4004866ಕ್ಕೆ ಏರಿಕೆಯಾಗಿದೆ. ಇನ್ನು 6445 ಸಕ್ರಿಯ ಪ್ರಕರಣಗಳಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು