News Karnataka Kannada
Sunday, May 12 2024
ಬೆಂಗಳೂರು ನಗರ

ಬೆಂಗಳೂರು: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ಓರ್ವ ನೈಜೀರಿಯನ್ ಪ್ರಜೆಯ ಬಂಧನ

Bengaluru: A Nigerian national has been arrested for his alleged involvement in drug peddling.
Photo Credit : By Author

ಬೆಂಗಳೂರು: ಬೆಂಗಳೂರಿನ ಸಿ.ಸಿ.ಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯನ್ನು ನಡೆಸಿ, ಬ್ಯುಸಿನೆಸ್‌ ವೀಸಾದಡಿ ಭಾರತಕ್ಕೆ ಬಂದಿದ್ದ ನೈಜೀರಿಯಾ ದೇಶದ ಓರ್ವ ವ್ಯಕ್ತಿಯನ್ನು ಬಂಧಿಸಿದ್ದು, ಬಂಧಿತ ಆರೋಪಿಯಿಂದ ಅಂದಾಜು 25 ಲಕ್ಷ ರೂ ಮೌಲ್ಯದ ನಿಷೇಧಿತ ಮಾದಕ ವಸ್ತುವಾದ 200 ಗ್ರಾಂ ಎಂ.ಡಿ.ಎಂ.ಎ ಕ್ರಿಸ್ಟೆಲ್ ಮತ್ತು ಕೃತ್ಯಕ್ಕೆ ಬಳಸಲಾಗುತ್ತಿದ್ದ 2 ಮೊಬೈಲ್ ಫೋನ್‌ಗಳು, ಒಂದು ದ್ವಿಚಕ್ರ ವಾಹನ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಯು ಅಕ್ರಮ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಬೆಂಗಳೂರಿನಲ್ಲಿ ನೆಲೆಸಿರುವ ಮತ್ತೋರ್ವ ನೈಜೀರಿಯನ್ ಪ್ರಜೆಯಿಂದ ಕಡಿಮೆ ಬೆಲೆಗೆ ನಿಷೇಧಿತ ಮಾದಕ ವಸ್ತುಗಳನ್ನು ಖರೀದಿ ಮಾಡಿ ಅವುಗಳನ್ನು ಹೆಚ್ಚಿನ ಬೆಲೆಗೆ ಪರಿಚಯಸ್ಥ ಗ್ರಾಹಕರಿಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆ ಮಾಡುತ್ತಿದ್ದುದಾಗಿ ತಿಳಿದುಬಂದಿದೆ. ಈತನಿಗೆ ನಿಷೇಧಿತ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಮತ್ತೊಬ್ಬ ನೈಜೀರಿಯನ್ ಪ್ರಜೆಯು ತಲೆಮರೆಸಿಕೊಂಡಿರುತ್ತಾನೆ.

ಆರೋಪಿಗಳು ಮಾದಕ ವಸ್ತುಗಳ ಸಾಗಾಟ/ಮಾರಾಟ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುವುದರಿಂದ ಇವರ ವಿರುದ್ಧ ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆ-1985 ಮತ್ತು ವಿದೇಶಿಯರ ಕಾಯ್ದೆ ರೀತಿಯ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ. ಈ ಕಾರ್ಯಾಚರಣಿಯನ್ನು ಸಿ.ಸಿ.ಬಿ ಘಟಕದ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
31125

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು