ಬೆಂಗಳೂರು: ಕರ್ನಾಟಕದಲ್ಲಿ ಭಾರತ ಐಕ್ಯತಾ ಯಾತ್ರೆ ಕುರಿತ ವೆಬ್ ಸೈಟ್ (www.bharathaikyatayatre.in) ಅನ್ನು ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಉದ್ಘಾಟಿಸಲಾಯಿತು. ವೆಬ್ ಸೈಟ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಮಳೆ ಅನಾಹುತದಿಂದ ರಾಜ್ಯದ ಜನರ ಅದರಲ್ಲೂ ವಿಶೇಷವಾಗಿ ಬೆಂಗಳೂರಿಗರ ಸಂಕಷ್ಟ ಹಾಗೂ ಪರಿಹಾರದ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಮಾಜಿ ಸಚಿವರಾದ ಕೆ ಜೆ ಜಾರ್ಜ್, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್ ಅವರು ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಧ್ರುವನಾರಾಯಣ್, ಸಂವಹನ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ ಅಲ್ಲಮ್ ವೀರಭದ್ರಪ್ಪ, ರಾಜ್ಯಸಭೆ ಮಾಜಿ ಸದಸ್ಯ ಪ್ರೊ. ರಾಜೀವ್ ಗೌಡ ಮತ್ತಿತರರು ಉಪಸ್ಥಿತರಿದ್ದರು.