News Karnataka Kannada
Tuesday, April 30 2024
ಬೆಂಗಳೂರು ನಗರ

ಬೆಂಗಳೂರು: ಗೃಹ ಸಚಿವರ ವಿರುದ್ಧ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ

Complaint filed against Araga Gyanendra for comments on Kharge's complexion
Photo Credit : Twitter

ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ತೀವ್ರಕೊಂಡ ಬೆನ್ನಲ್ಲೇ 40 ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಜಯಮಹಲ್ ನಲ್ಲಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಮನೆ ಬಳಿ ಬೆಳಿಗ್ಗೆಯಿಂದ, ರಾಜ್ಯದಲ್ಲಿ ಸರಣಿ ಹತ್ಯೆ ಪ್ರಕರಣ ಖಂಡಿಸಿ ಹಾಗೂ ಎಸ್ ಡಿ ಪಿ ಐ, ಪಿ ಎಫ್ ಐ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಗೃಹ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಗೃಹ ಸಚಿವರ ಮನೆ ಬಾಗಿಲು ತೆರೆಯಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ತಡೆಯಲು ಮುಂದಾಗುತ್ತಿದ್ದಂತೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಇದೀಗ 40 ಎಬಿವಿಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು