ಬೆಂಗಳೂರು ನಗರ

ಬೆಂಗಳೂರು: ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿ ಸುಲಿಗೆ ಮಾಡಿದ್ದ ಆರೋಪಿಗಳು ಬಂಧನ

ಬೆಂಗಳೂರು: ವೈದ್ಯಕೀಯ ಸೀಟು ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದ ಕೆಲವರು, ಹಣ ವಾಪಸು ಕೇಳಿದ್ದಕ್ಕೆ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿ ಸುಲಿಗೆ ಮಾಡಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದದ ವೈದ್ಯ ಶಂಕರ್ ಬಾಬು ಅವರನ್ನು ಈ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿ ₹ 1.16 ಕೋಟಿ ಸುಲಿಗೆ ಮಾಡಿದ್ದ ಪ್ರಕರಣದಲ್ಲಿ ಮತ್ತೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಪ್ರಕರಣದ ತನಿಖೆ ಕೈಗೊಂಡು ಪ್ರಮುಖ ಆರೋಪಿಗಳಾದ ಆಳಂದದ ನಾಗರಾಜ್ ಬೋರುಪಿ, ಬೆಂಗಳೂರಿನ ಮಧು ಹಾಗೂ ಓಂಪ್ರಕಾಶ್ ಎಂಬುವರನ್ನು ಈ ಹಿಂದೆಯೇ ಬಂಧಿಸಲಾಗಿತ್ತು. ಇದೀಗ ಮತ್ತೆ ಇಬ್ಬರನ್ನು ಬಂಧಿಸಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ಶಂಕರ್ ಅವರ ಮಗನಿಗೆ ಎಂ.ಎಸ್. ರಾಮಯ್ಯ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಸೀಟು ಕೊಡಿಸುವುದಾಗಿ ಆಮಿಷವೊಡ್ಡಿದ್ದ ಆರೋಪಿಗಳು, ಹಂತ ಹಂತವಾಗಿ ₹ 66 ಲಕ್ಷ ಪಡೆದಿದ್ದರು. ಸೀಟು ಕೊಡಿಸದಿದ್ದಾಗ ಹಣ ವಾಪಸು ನೀಡುವಂತೆ ದೂರುದಾರ ಒತ್ತಾಯಿಸಿದ್ದರು.’

‘ಹಣ ಕೊಡುವುದಾಗಿ ಹೇಳಿ ದೂರುದಾರರನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದ ಆರೋಪಿಗಳು, ಮೆಜೆಸ್ಟಿಕ್‌ನಲ್ಲಿರುವ ಯು.ಟಿ ವಸತಿಗೃಹದ ಕೊಠಡಿಯಲ್ಲಿ ಇರಿಸಿದ್ದರು. ಅದೇ ಕೊಠಡಿಗೆ ಕೆಲ ಯುವತಿಯರನ್ನು ಕಳುಹಿಸಿ, ಸಲುಗೆಯಿಂದ ವರ್ತಿಸುವಂತೆ ಮಾಡಿ ಫೋಟೊ ಕ್ಲಿಕ್ಕಿಸಿಕೊಂಡಿದ್ದರು. ಫೋಟೊವನ್ನೇ ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹ 50 ಲಕ್ಷ ಸುಲಿಗೆ ಮಾಡಿದ್ದರು’ ಎಂದು ಪೊಲೀಸರು ತಿಳಿಸಿದರು.

Gayathri SG

Recent Posts

ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 mins ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

14 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

32 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

42 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

55 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

10 hours ago