ಬೆಂಗಳೂರು ನಗರ

ಬೆಂಗಳೂರು: ಸ್ನೇಹಿತನ ಭೇಟಿಗಾಗಿ ದುಬೈನಿಂದ ಬಂದ ಗಗನಸಖಿ ಸಾವು

ಬೆಂಗಳೂರು: ಸ್ನೇಹಿತನ ಭೇಟಿಗಾಗಿ ದುಬೈನಿಂದ ಬೆಂಗಳೂರಿಗೆ ಬಂದಿದ್ದ ಗಗನಸಖಿಯೊಬ್ಬರು ಅನುಮಾನಾಸ್ಪದವಾಗಿ ಸಾವನಪ್ಪಿರುವ ಘಟನೆ ವರದಿಯಾಗಿದೆ. ಕೋರಮಂಗಲದ ರೇಣುಕಾ ರೆಸಿಡೆನ್ಸಿ ಆವರಣದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಹಿಮಾಚಲ ಪ್ರದೇಶದ 28 ವರ್ಷದ ಅರ್ಚನಾ ಎಂದು ಗುರುತಿಸಲಾಗಿದೆ. ಆಕೆ ಅಪಾರ್ಟ್‌ಮೆಂಟ್‌ನ ನಾಲ್ಕನೇ ಮಹಡಿಯಿಂದ ಜಿಗಿದಿದ್ದಳು. ಪ್ರಾಥಮಿಕ ತನಿಖೆಯ ಪ್ರಕಾರ ಆಕೆ ಪ್ರತಿಷ್ಠಿತ ಏರ್‌ಲೈನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಸಾಫ್ಟ್‌ವೇರ್ ವೃತ್ತಿನಿರತ ಸ್ನೇಹಿತ ಆದೇಶ್‌ನನ್ನು ಭೇಟಿ ಮಾಡಲು ದುಬೈನಿಂದ ಬಂದಿದ್ದರು. ಆದೇಶ್ ಕೇರಳ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಕಳೆದ ಹಲವು ವರ್ಷಗಳಿಂದ ಇಬ್ಬರೂ ಸಂಬಂಧ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

Gayathri SG

Recent Posts

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

5 mins ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

20 mins ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

38 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

54 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

1 hour ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

2 hours ago