ಬೆಂಗಳೂರು: ಧರ್ಮ, ಜಾತಿ ಬಿಟ್ಟರೆ ರಾಷ್ಟ್ರೀಯ ಪಕ್ಷಗಳಿಗೆ ಬೇರೆ ವಿಷಯ ಇಲ್ಲ

ಬೆಂಗಳೂರು: ಧರ್ಮ, ಜಾತಿ ಹೆಸರಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಜನರ ಮನಸ್ಸನ್ನು ಕೆಡಿಸುತ್ತವೆ. ಆ ಎರಡೂ ಪಕ್ಷಗಳಿಗೆ ಅಭಿವೃದ್ಧಿ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾ ಪ್ರಹಾರ ನಡೆಸಿದರು.

ಬಸವನಗುಡಿಯಲ್ಲಿ ಜೆಡಿಎಸ್ ಕಚೇರಿಯನ್ನು ಉದ್ಘಾಟನೆ ಮಾಡುವ ಮುನ್ನ ನೆಟ್ಕಲ್ಲಪ್ಪ ವೃತ್ತದಲ್ಲಿರುವ ಶ್ರೀ ಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು.

ಹಿಂದೂ ಪದ ಅಶ್ಲೀಲ ಎಂದು ಶಾಸಕ ಸತೀಶ್ ಜಾರಕಿಹೊಳಿ ಅವರು ನೀಡಿರುವ ಹೇಳಿಕೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಸೂಕ್ಷ್ಮ ವಿಚಾರ ಇಟ್ಟುಕೊಂಡು ಚುನಾವಣಾ ರಾಜಕೀಯ ಮಾಡುತ್ತಿವೆ. ಇದು ಸರಿಯಲ್ಲ ಎಂದರು.

ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಎಲ್ಲಾ ಅರಿವಿದ್ದರೂ ಜನರ ಸಮಸ್ಯೆ ಕೇಳಲು ಯಾರೂ ತಯಾರಿಲ್ಲ. ನಾನು ಹೊಡೆದಂಗೆ ಮಾಡ್ತೀನಿ, ನೀನು ಅತ್ತಂಗೆ ಮಾಡು ಎನ್ನುವಂಥ ನೀತಿ ಅನುಸರಿಸುತ್ತಿವೆ. ಇವರ ಯೋಗ್ಯತೆ ಏನು ಎನ್ನುವುದು ಜನರಿಗೆ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.

ಬಸವನಗುಡಿ ಕ್ಷೇತ್ರದಲ್ಲಿ ಹೆಚ್ಡಿಕೆ ಯಾತ್ರೆ:

ಇದಾದ ನಂತರ ಕ್ಷೇತ್ರದ ನೆಟ್ಕಲ್ಲಪ್ಪ ವೃತ್ತದಲ್ಲಿರುವ ಶ್ರೀ ಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿದ ನಂತರ ತೆರೆದ ವಾಹನದಲ್ಲಿ ಮಾಜಿ ಮುಖ್ಯಮಂತ್ರಿಗಳು ಮೆರವಣಿಗೆ ಸಾಗಿದರು. ಎನ್ ಆರ್ ಕಾಲೊನಿ, ಹನುಮಂತ ನಗರ, ಶ್ರೀನಗರ ಬಸ್ ನಿಲ್ದಾಣ, ಪಿಇ ಎಸ್ ಕಾಲೇಜು, ಹನುಮಂತನಗರ ಮುಖ್ಯರಸ್ತೆ, ಸೀತಾ ಸರ್ಕಲ್ ವರೆಗೆ ಸುಮಾರು ೮ ಕಿ.ಮೀ. ದೂರ ಕ್ರಮಿಸಿದರು.

ಸೀತಾ ಸರ್ಕಲ್ ಬಳಿ ನೂತನವಾಗಿ ಸ್ಥಾಪಿಸಲಾಗಿರುವ ಜೆಡಿಎಸ್ ಕಚೇರಿಯನ್ನು ಮಾಜಿ ಮುಖ್ಯಮಂತ್ರಿಗಳು ಉದ್ಘಾಟಿಸಿದರು.

ವಿಧಾನ ಪರಿಷತ್ ಸದಸ್ಯ ಟಿ ಎ ಶರವಣ, ಬಸವನಗುಡಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅರಮನೆ ಶಂಕರ್, ಪಕ್ಷದ ಹಿರಿಯ ಮುಖಂಡ ಬಾಗೇಗೌಡ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

Ashika S

Recent Posts

ಉತ್ತರ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು: ಭೋಜೇಗೌಡ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್‌ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…

6 mins ago

ನಗರ ಸಾರಿಗೆ ಬಸ್‌ ಮಾರ್ಗ ಬದಲಾಯಿಸಲು ಆಗ್ರಹ

ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್‌ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…

17 mins ago

ನಟಿ ಮಾಳವಿಕಾ ಅವಿನಾಶ್ ತಂದೆ ನಟೇಶನ್ ಗಣೇಶನ್ ನಿಧನ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.

25 mins ago

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

41 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

48 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

1 hour ago