ಬೆಂಗಳೂರು ನಗರ

ಮಂಗಳವಾರ ಬೆಂಗಳೂರು ಬಂದ್​ಗೆ ಕರೆ: ಹಲವು ಸಂಘಟನೆಗಳಿಂದ ಬೆಂಬಲ

ಬೆಂಗಳೂರು: ಕಾವೇರಿ ಸಮಸ್ಯೆ ಮತ್ತೆ ಭುಗಿಲೆದ್ದಿದ್ದು, ಸುಪ್ರೀಂಕೋರ್ಟ್ ಆದೇಶದನ್ವಯ ಕರ್ನಾಟಕವು ತಮಿಳುನಾಡಿಗೆ ಕಾವೇರಿ ನೀರು ಹರಿಯ ಬಿಡಬೇಕಿದೆ. ಈ ಬಗ್ಗೆ ಸ್ಪಷ್ಟ ನಿಲುವಿಗೆ ಸರ್ಕಾರ ಇನ್ನಷ್ಟೆ ಬರಬೇಕಿದೆ. ಇದರ ನಡುವೆ ರೈತರು, ಕನ್ನಡ ಪರ ಸಂಘಟನೆಗಳು ಇನ್ನಿತರೆ ಕೆಲವು ಸಂಘಟನೆಗಳು ಕಾವೇರಿ ನೀರು ತಮಿಳುನಾಡಿಗೆ ಹರಿಸದಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದು ಮಂಗಳವಾರ (ಸೆಪ್ಟೆಂಬರ್ 24) ಬಂದ್​ಗೆ ಕರೆ ನೀಡಿವೆ. ಬಂದ್​ಗೆ ಹಲವು ಸಂಘ-ಸಂಸ್ಥೆಗಳು ಬೆಂಬಲ ಘೋಷಿಸಿವೆ.

ಮಂಗಳವಾರ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದ್ದು, ಬಂದ್​ಗೆ ಆಟೋ-ಟ್ಯಾಕ್ಸಿ, ಚಾಲಕರು, ಐಟಿ-ಬಿಟಿ ಒಕ್ಕೂಟ ಇನ್ನೂ ಹಲವಾರು ಸಂಘಟನೆಗಳು ಬೆಂಬಲ ನೀಡಿವೆ. ಇದರ ನಡುವೆ ಕನ್ನಡ ಕಿರುತೆರೆ ವಲಯವೂ ಸಹ ಮಂಗಳವಾರದ ಬೆಂಗಳೂರು ಬಂದ್​ಗೆ ಬೆಂಬಲ ನೀಡಿದೆ. ಅಲ್ಲದೆ ಮಂಗಳವಾರದಂದು ಕಿರುತೆರೆಗೆ ಸಂಬಂಧಿಸಿದ ಯಾವುದೇ ಚಿತ್ರೀಕರಣ ನಡೆಯುವುದಿಲ್ಲ ಎಂದಿದ್ದಾರೆ ಸಂಘದ ಅಧ್ಯಕ್ಷ ಗಣೇಶ್ ರಾವ್ ಕೇಸರ್ಕರ್ ಹೇಳಿದ್ದಾರೆ.

ಧಾರಾವಾಹಿ, ರಿಯಾಲಿಟಿ ಶೋಗಳ ಚಿತ್ರೀಕರಣವನ್ನು ಬಂದ್ ಮಾಡುವ ಜೊತೆಗೆ ಬಂದ್ ದಿನದಂದು ನಿಗದಿ ಪಡಿಸಿದ ಸ್ಥಳಕ್ಕೆ ಹಾಜರಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಹ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಸಂಘಟನೆ ತನ್ನ ಸದಸ್ಯರು ಹಾಗೂ ಪದಾಧಿಕಾರಿಗಳ ಬಳಿ ಮನವಿ ಮಾಡಿದೆ.

ಇನ್ನು ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳ ನೇತೃತ್ವದಲ್ಲಿ ಈ ಬೆಂಗಳೂರು ಬಂದ್ ನಡೆಯುತ್ತಿದೆ. ಆಟೋ-ಟ್ಯಾಕ್ಸಿ, ಖಾಸಗಿ ಬಸ್, ಲಾರಿ, ಕಾರ್ಮಿಕ ಸಂಘಟನೆ, ಐಟಿ-ಬಿಟಿ, ಹೋಟೆಲ್-ಕಾಂಡಿಮೆಂಟ್ಸ್, ಇನ್ನೂ ಹಲವು ಸಂಘಟನೆಗಳು ಬೆಂಬಲ ನೀಡಿವೆ.

Gayathri SG

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

8 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

17 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

28 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

47 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

52 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

1 hour ago