ಬೆಂಗಳೂರು: ರಾಜ್ಯ ವಿಧಾನಸಭೆಗೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, 189 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. 35 ಕ್ಷೇತ್ರಗಳ ಪಟ್ಟಿ ಬಾಕಿ ಉಳಿಸಿಕೊಂಡಿದೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ಕರ್ನಾಟಕ ಚುನಾವಣೆ ಪ್ರಭಾರಿ ಧರ್ಮೇಂದ್ರ ಪ್ರಧಾನ್, 31 ಜಿಲ್ಲೆಯ 25 ಸಾವಿರ ಕಾಯರ್ಯಕರ್ತರ ಅಭಿಪ್ರಾಯ ಪಡೆದು ಪಟ್ಟಿ ಘೋಷಣೆ ಮಾಡಿದ್ದೇವೆ ಎಂದರು.