News Karnataka Kannada
Wednesday, May 01 2024
ಬೆಂಗಳೂರು ನಗರ

ಬೆಂಗಳೂರು: ಪರಿಷತ್ ಉಪ ಚುನಾವಣೆಗೆ ಬಿಜೆಪಿಯಿಂದ ಬಾಬೂರಾವ್ ಚಿಂಚನಸೂರ್ ಗೆ ಟಿಕೆಟ್ ಘೋಷಣೆ

Bengaluru: BJP announces ticket to Baburao Chinchanasur for Council by-election
Photo Credit : Twitter

ಬೆಂಗಳೂರು: ಮಾಜಿ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ವಿಧಾನಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಈ ಸ್ಥಾನಕ್ಕೆ ಬಿಜೆಪಿಯಿಂದ ಬಾಬೂರಾವ್ ಚಿಂಚನಸೂರ್ ಗೆ ಟಿಕೆಟ್ ಘೋಷಣೆ ಮಾಡಿದೆ.

ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಮಾಡಲಾಗಿತ್ತು. ಇದೀಗ ಈ ಸ್ಥಾನಕ್ಕೆ ಬಿಜೆಪಿಯಿಂದ ಟಿಕೆಟ್ ಫೈನಲ್ ಮಾಡಿದೆ. ಕೋಲಿ ಸಮುದಾಯದ ಬಾಬೂರಾವ್ ಚಿಂಚನಸೂರ್ ಗೆ ಟಿಕೆಟ್ ನೀಡಿದೆ.

ಕೇಂದ್ರ ಚುನಾವಣಾ ಆಯೋಗದಿಂದ ವಿಧಾನಪರಿಷತ್ ಉಪ ಚುನಾವಣೆಗೆ ಅಧಿಸೂಚನೆ ಹೊರಡಿಸಿತ್ತು. ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಅವರು ಮಾರ್ಚ್ 31, 2022ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಿ.ಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿರುವಂತ ಸ್ಥಾನಕ್ಕೆ ಚುನಾವಣೆಗೆ ದಿನಾಂಕ ನಿಗದಿ ಪಡಿಸಲಾಗಿದೆ. ಜುಲೈ. 25ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ದಿನಾಂಕ 01-08-2022 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ನಾಮಪತ್ರಗಳ ಪರಿಶೀಲನೆ ದಿನಾಂಕ 02-08-2022ರಂದು ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನ ದಿನಾಂಕ 04-08-2022 ಆಗಿದೆ. ದಿನಾಂಕ 11-08-2022ರಂದು ಮತದಾನ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಈ ಬಳಿಕ ಸಂಜೆ 5 ಗಂಟೆಗೆ ಮತಏಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು