ಬೆಂಗಳೂರು: ಬೊಮ್ಮಾಯಿಗೆ ವಿಪಕ್ಷ ನಾಯಕ ಪಟ್ಟ ಖಚಿತ…!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೋಮವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕರ ನೇಮಕದ ಕುರಿತು ಅಮಿತ್‌ ಶಾ ಅವರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.

ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಬೊಮ್ಮಾಯಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದ್ದು, ಈ ನಿಟ್ಟಿನಲ್ಲಿ ಭೇಟಿ ಮಹತ್ವ ಪಡೆದುಕೊಂಡಿದೆ. ಬಿಜೆಪಿಯ ಎಲ್ಲಾ 66 ಶಾಸಕರು ವಿರೋಧ ಪಕ್ಷದ ನಾಯಕರಾಗಿದ್ದು, ರಾಜ್ಯ ಸರ್ಕಾರ ಎಚ್ಚರಿಕೆಯಿಂದ ನಡೆಯಬೇಕು ಎಂದು ಬೊಮ್ಮಾಯಿ ಇತ್ತೀಚೆಗೆ ಹೇಳಿಕೆ ನೀಡಿದ್ದನ್ನು ಗಮನಿಸಬಹುದು.

ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಬಿಜೆಪಿ ಹೈಕಮಾಂಡ್ ಕರ್ನಾಟಕ ನಾಯಕತ್ವದ ವಿರುದ್ಧ ಅಸಮಾಧಾನಗೊಂಡಿದೆ. ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟದಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಶಾ ಬೇಸರಗೊಂಡಿದ್ದು, ರಾಜ್ಯ ರಾಜಕಾರಣದ ಕುರಿತು ಆಸಕ್ತಿ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ಇತರರೊಂದಿಗೆ ಹೈಕಮಾಂಡ್ ಮಾತನಾಡಿದ್ದು, ಬಿಜೆಪಿ ಶಾಸಕರಾದ ಸುರೇಶ್ ಕುಮಾರ್ (ಬ್ರಾಹ್ಮಣ), ವಿ.ಸುನೀಲ್ ಕುಮಾರ್ (ಒಬಿಸಿ), ಡಾ.ಸಿ.ಎನ್. ಅಶ್ವಥ್ ನಾರಾಯಣ (ಒಕ್ಕಲಿಗ), ಆರ್.ಅಶೋಕ ( ಒಕ್ಕಲಿಗ), ಅರವಿಂದ್ ಬೆಲ್ಲದ್ (ಲಿಂಗಾಯತ) ಅವರನ್ನೂ ಸ್ಥಾನಕ್ಕೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಪರಿಗಣಿಸಲಾಗಿದೆ. ಯತ್ನಾಳ್‌ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರದಿಂದ ಕೆಳಗಿಳಿಯಲು ಕಾರಣವಾಗಿದ್ದು, ಇದೇ ಕಾರಣಕ್ಕೆ ಯತ್ನಾಳ್‌ ಅವರಿಗೆ ಅಧಿಕಾರ ನೀಡುವುದನ್ನು ವಿರೋಧಿಸುತ್ತಿದ್ದಾರೆ.

Sneha Gowda

Recent Posts

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

14 mins ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

32 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

8 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

9 hours ago