ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಂಗಳೂರಿನ ಗಂಗಾನಗರ ಬಡಾವಣೆಯಲ್ಲಿ ಪಿಎಸ್ಆರ್ ಬಿಲ್ಡರ್ಸ್, ಗ್ರಾಸ್ ರೂಟ್, ಎಬಿಎಸ್ಎಸ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ಏರ್ಪಡಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಉತ್ಸವವನ್ನು ಉದ್ಘಾಟಿಸಿ ಶಾಲಾ ಮಕ್ಕಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರವನ್ನು ಪ್ರಧಾನ ಮಾಡಿದರು.
ಸಮಾರಂಭದಲ್ಲಿ ಅರಣ್ಯ ಸಚಿವ ಉಮೇಶ ಕತ್ತಿ, ಶಿಕ್ಷಣ ಸಚಿವ ಬಿ ಸಿ ನಾಗೇಶ್, ಮಾಜಿ ಸಚಿವ ಕಟ್ಟಸುಬ್ರಮಣ್ಯ ನಾಯ್ಡು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ ಏನ್ ಜೀವರಾಜ ಎಂಸಿಎ ಅಧ್ಯಕ್ಷ ಮುನಿಕೃಷ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.