ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಕೆಂಪೇಗೌಡ ಪ್ರತಿಮೆ ಸ್ಥಾಪನೆಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲಿ ಬೆಂಗಳೂರಿನ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜೊತೆಗೂಡಿ ಪ್ರತಿಮೆ ಸ್ಥಾಪನೆಗೆ ನಿರ್ದಿಷ್ಟ ಸ್ಥಳ ಗುರುತಿಸುವಂತೆ ರಾಜ್ಯ ಲೋಕೋಪಯೋಗಿ ಇಲಾಖೆಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಈಶಾನ್ಯ ಭಾಗದ ರೋಸ್ ಗಾರ್ಡನ್ ನಲ್ಲಿ ಬಸವೇಶ್ವರ ಪುತ್ಥಳಿ ಸ್ಥಾಪನೆಗೆ ರಾಜ್ಯ ಸರ್ಕಾರ ಮಂಜೂರಾತಿ ನೀಡಿದೆ. ನವೆಂಬರ್ 1 ರಂದು ಕೆಂಪೇಗೌಡ ಪ್ರತಿಮೆ ಮತ್ತು ಬಸವೇಶ್ವರ ಪುತ್ಥಳಿ‌ ಅನಾವರಣಗೊಳಿಸಲು ಕ್ರಮ ವಹಿಸುವಂತೆಯೂ ಲೋಕೋಪಯೋಗಿ ಇಲಾಖೆಗೆ ಡಿಪಿಎಆರ್ ನಿಂದ ಸೂಚನೆ ನೀಡಲಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿ ಅವರು ಕಳೆದ ಕೆಂಪೇಗೌಡ ಜಯಂತಿ ವೇಳೆ ವಿಧಾನಸೌಧ ಬಳಿ ಪ್ರತಿಮೆ ಸ್ಥಾಪನೆ ಬಗ್ಗೆ ಘೋಷಣೆ ಮಾಡಿದ್ದರು. ಸಚಿವ ಡಾ. ಅಶ್ವಥ್ ನಾರಾಯಣ ಮತ್ತು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರುಗಳು ಕೆಂಪೇಗೌಡ ಪ್ರತಿಮೆ ಸ್ಥಾಪನೆ ಸಂಬಂಧ ಸಿಎಂ ಬೊಮ್ಮಾಯಿಗೆ ಮನವಿ ಮಾಡಿದ್ದರು. ಇನ್ನು ಬಿ.ಎಸ್. ಯಡಿಯೂರಪ್ಪ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಬಸವೇಶ್ವರ ಪುತ್ಥಳಿ ಸ್ಥಾಪನೆ ಬಗ್ಗೆ ಘೋಷಣೆ ಮಾಡಿದ್ದರು.

Sneha Gowda

Recent Posts

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

3 mins ago

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

21 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

32 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

47 mins ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

1 hour ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

1 hour ago