ಬೆಂಗಳೂರು: ದೆಹಲಿಗೆ ಸಿಎಂ ಸಿದ್ದರಾಮಯ್ಯ,‌ ಡಿಸಿಎಂ ಶಿವಕುಮಾರ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಸಂಜೆ ರಾಷ್ಟ್ರ ರಾಜಧಾನಿ ನವದೆಹಲಿಗೆ ಭೇಟಿ ನೀಡುತ್ತಿದ್ದು, ಭೇಟಿ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಪಕ್ಷದ ಕೇಂದ್ರ ನಾಯಕತ್ವ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚಿ ನಡೆಸಲಿದ್ದಾರೆಂದು ತಿಳಿದುಬಂದಿದೆ. ಶುಕ್ರವಾರ ಅಥವಾ ಶನಿವಾರ ಸಿಎಂ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಆದರೆ, ಸಿಎಂ ಹಾಗೂ ಡಿಸಿಎಂ ಕೇಂದ್ರ ನಾಯಕರ ಜತೆ ಚರ್ಚಿಸಿದ ಬಳಿಕವೇ ಈ ಕುರಿತು ಅಂತಿಮ ನಿರ್ಧಾರಗಳಾಗಲಿವೆ ಎಂದು ಹೇಳಲಾಗುತ್ತಿದೆ.

ಮೂರು ದಿನಗಳ ವಿಧಾನಸಭೆಯ ಅಧಿವೇಶನ ಬುಧವಾರ ಮುಕ್ತಾಯಗೊಂಡ ನಂತರ, ಇಬ್ಬರು ಉನ್ನತ ನಾಯಕರು ವಿಶೇಷ ವಿಮಾನದ ಮೂಲಕ ನವದೆಹಲಿಗೆ ಪ್ರಯಾಣಿಸಲಿದ್ದಾರೆ.

Umesha HS

Recent Posts

ರೈತರಿಗಾಗಿ ಹಣ ಕೇಳಿದ್ದು, ಗ್ಯಾರಂಟಿಗಾಗಿ ಹಣ ಕೇಳಿಲ್ಲ, ಕೇಳುವುದು ಇಲ್ಲ : ಸಿಎಂ

ರೈತರಿಗಾಗಿ ಹಣ ಕೇಳಿದ್ದು, ಗ್ಯಾರಂಟಿಗಾಗಿ ಹಣ ಕೇಳಿಲ್ಲ ಮತ್ತು ಕೇಳುವುದು ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ…

14 mins ago

ತಂದೆ ಕಿರುಕುಳಕ್ಕೆ ಬೇಸತ್ತು ತಾಯಿ ಆತ್ಮಹತ್ಯೆಗೆ ಯತ್ನ: ಪ್ರಾಣ ಉಳಿಸಿದ 7 ವರ್ಷದ ಬಾಲಕಿ

ಅಪ್ಪನ ದೌರ್ಜನ್ಯಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ತಾಯಿಯನ್ನು ಏಳು ವರ್ಷದ ಬಾಲಕಿಯೊಬ್ಬಳು ಕಾಪಾಡಿದ ಘಟನೆ ಗುಜರಾತ್​ನ ಅಹಮದಾಬಾದ್​ನಲ್ಲಿ ನಡೆದಿದೆ.

34 mins ago

ಇರಾಕ್‌ನ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ದುಷ್ಕರ್ಮಿಗಳ ಗುಂಡಿಗೆ ಬಲಿ

ಇರಾಕ್‌ನ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ರನ್ನು ಬಾಗ್ದಾದ್‌ನ ಜೊಯೌನಾ ಜಿಲ್ಲೆಯಲ್ಲಿ ತಡ ರಾತ್ರಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ.  

1 hour ago

ತೆಕ್ಕಟ್ಟೆ: ಇನ್ನೋವಾ ಕಾರು ಮರಕ್ಕೆ ಡಿಕ್ಕಿ; ಯುವತಿ ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ

ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ…

1 hour ago

ಮೋದಿ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಉಸ್ಮಾನ್‌ ಘನಿ ಪೊಲೀಸರ ವಶಕ್ಕೆ

ಪ್ರಧಾನಿ ಮೋದಿಯವರ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಬಿಕಾನೇರ್‌ನ ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ಜಿಲ್ಲಾಧ್ಯಕ್ಷ ಉಸ್ಮಾನ್‌ ಘನಿಯನ್ನು ಪೊಲೀಸರು ಬಂಧಿಸಿದ್ದಾರೆ.

2 hours ago

ಕಾಂಗ್ರೆಸ್‌ ಪಕ್ಷಕ್ಕೆ ಮುಸ್ಲಿಮರ ಮತ ಬೇಕು, ಆದರೆ ಮುಸ್ಲಿಮ್‌ ಅಭ್ಯರ್ಥಿ ಬೇಡ ಎಂದ ನಸೀಮ್‌ ಖಾನ್‌

ಕಾಂಗ್ರೆಸ್‌ಗೆ ಮುಸ್ಲಿಮರ ಮತ ಬೇಕು. ಆದರೆ ಮುಸ್ಲಿಮ್‌ ಅಭ್ಯರ್ಥಿ ಬೇಡ ಎಂದು ಹೇಳಿರುವ ನಸೀಮ್‌ ಖಾನ್‌ ಪಕ್ಷದ ವಿರುದ್ಧ ಸಿಟ್ಟಾಗಿದ್ದು…

2 hours ago