ಬೆಂಗಳೂರು: ಇನ್ನಷ್ಟು ಗ್ಯಾರಂಟಿಗಳ ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು: ಈಗಾಗಲೇ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿರುವ ಕಾಂಗ್ರೆಸ್‌ ಇನ್ನೂ ಹತ್ತು ಹಲವು ಭರವಸೆಗಳನ್ನು ಒಳಗೊಂಡ ಚುನಾವಣಾ ಪ್ರಣಾಳಿಕೆಯನ್ನು ಮಂಗಳವಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಾಗ್ದಾನಗಳ ಪಟ್ಟಿ ಬಿಡುಗಡೆಗೊಂಡಿದೆ. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಕರಾವಳಿ ಕರ್ನಾಟಕ, ಮಲೆನಾಡು ಪ್ರದೇಶ ಹಾಗೂ ಬೆಂಗಳೂರು ನಗರಗಳಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆಯಾಗಿದೆ. ಸರ್ವ ಜನಾಂಗದ ಶಾಂತಿಯ ತೋಟ ಇದುವೆ ಕಾಂಗ್ರೆಸ್​ ಬದ್ಧತೆ ಎನ್ನುವ ಹೆಸರಿನಲ್ಲಿ ಪ್ರಣಾಳಿಕೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಡುಗಡೆಗೊಳಿಸಿದರು.

ಐದು ಗ್ಯಾರಂಟಿ ಯೋಜನೆ ಪ್ರಕಟ:

ಈಗಾಗಲೇ ಪ್ರತಿ ಮನೆಗೆ 200 ಯುನಿಟ್‌ ಉಚಿತ ವಿದ್ಯುತ್‌ ನೀಡುವ ‘ಗೃಹ ಜ್ಯೋತಿ’, ಪ್ರತಿ ಮನೆಯೊಡತಿಗೆ 2 ಸಾವಿರ ರೂ. ಮಾಸಿಕ ಸಹಾಯ ಧನ ನೀಡುವ ‘ಗೃಹ ಲಕ್ಷ್ಮೀ’, ಪದವೀಧರರಿಗೆ 3 ಸಾವಿರ ರೂ. ಹಾಗೂ ಡಿಪ್ಲೊಮಾ ಪದವೀಧರರಿಗೆ 1,500 ರೂ. ಮಾಸಿಕ ನಿರುದ್ಯೋಗ ಭತ್ಯೆ ನೀಡುವ ‘ಯುವ ನಿಧಿ’, ಪ್ರತಿ ತಿಂಗಳು ಪ್ರತಿ ವ್ಯಕ್ತಿಗೆ 10 ಕೆ.ಜಿ. ಅಕ್ಕಿ ನೀಡುವ ‘ಅನ್ನಭಾಗ್ಯ’, ಮಹಿಳೆಯರಿಗೆ ಉಚಿತ ಪ್ರಯಾಣದ ‘ಸಖಿ’ ಭರವಸೆ ಸೇರಿದಂತೆ ಐದು ಗ್ಯಾರಂಟಿ ಯೋಜನೆ ಪ್ರಕಟಿಸಲಾಗಿದೆ. ಇವುಗಳ ಜತೆಯಲ್ಲಿ ಪೌರ ಕಾರ್ಮಿಕರ ಹುದ್ದೆ ಕಾಯಂ, ಹಳೆ ಪಿಂಚಣಿ ಮರು ಜಾರಿ ಸೇರಿದಂತೆ ಹಲವು ಮಹತ್ವದ ಅಂಶಗಳನ್ನು ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಣಾಳಿಕೆಯಲ್ಲಿರುವ ಭರವಸೆಗಳು

*ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್​
*ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ
*ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ.
*ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು
*ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ.
*ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ
*ಪೌರ ಕಾರ್ಮಿಕರ ಹುದ್ದೆ ಕಾಯಂ
*ಹಳೆ ಪಿಂಚಣಿ ಮರು ಜಾರಿ

ಪ್ರಣಾಳಿಕೆ ಬಿಡುಗಡೆಗೆ ಸಾಂಸ್ಕೃತಿಕ ಟಚ್ ನೀಡಲಾಗಿದೆ. ವೀಳ್ಯದೆಲೆ ಅಡಕೆ, ಅರಿಶಿನ, ಕುಂಕುಮ ಇಟ್ಟು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಪ್ರಣಾಳಿಕೆ ಪುಸ್ತಕಕ್ಕೆ ಕನ್ನಡದ ಬಾವುಟದ ಬಣ್ಣ ಹಚ್ಚಲಾಗಿದೆ.

ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್​ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಜನರ ಜತೆ ಚರ್ಚಿಸಿದ ಬಳಿಕ ಪ್ರಣಾಳಿಕೆ ತಯಾರು ಮಾಡಿದ್ದೇವೆ. ಬೆಂಗಳೂರಿನ ಸಮಸ್ಯೆಗಳ ಗುರುತಿಸಲು ಅನೇಕ ಸಂಸ್ಥೆಗಳ ಸಲಹೆ ಪಡೆದಿದ್ದೇವೆ. ನಮ್ಮ ಮುಖಂಡರ ಜತೆಗೂ ಚರ್ಚಿಸಿ ಪ್ರಣಾಳಿಕೆ ತಯಾರಿಸಿದ್ದೇವೆ. ‘ಸರ್ವ ಜನಾಂಗದ ಶಾಂತಿಯ ತೋಟ ಇದುವೆ ಕಾಂಗ್ರೆಸ್​ ಬದ್ಧತೆ’ ಈ ಘೋಷ ವಾಕ್ಯದೊಂದಿಗೆ ಪ್ರಣಾಳಿಕೆ ತಯಾರು ಮಾಡಿದ್ದೇವೆ. ಮುಂದಿನ 25 ವರ್ಷಗಳ ದೂರದೃಷ್ಟಿ ಇಟ್ಟುಕೊಂಡು ಪ್ರಣಾಳಿಕೆ ತಯಾರಿ ಮಾಡಿದ್ದೇವೆ ಎಂದರು.

Gayathri SG

Recent Posts

ನಾಳೆ ದಾವಣಗೆರೆಗೆ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭೇಟಿ

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.

3 hours ago

ಕಾರ್ಮಿಕರನ್ನು ಮತ್ತೆ ಗುಲಾಮಗಿರಿಯತ್ತ ತಳ್ಳುವ ಹುನ್ನಾರ ನಡೆಸುತ್ತಿದೆ: ಸುನಿಲ್ ಕುಮಾರ್ ಬಜಾಲ್

ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10…

3 hours ago

ಮಲೆಮಹದೇಶ್ವರನ ಹುಂಡಿಯಲ್ಲಿ 3.05 ಕೋಟಿ ಕಾಣಿಕೆ ಸಂಗ್ರಹ

ಪವಾಡ ಪುರುಷ ಮಲೆ ಮಹದೇಶ್ವರ ಕೋಟಿ ಒಡೆಯನಾಗಿ ಮುಂದುವರೆಯುತ್ತಿದ್ದು, ಇದೀಗ 34 ದಿನಗಳ ಅಂತರದಲ್ಲಿ ಮೂರು ಕೋಟಿ ನಾಲ್ಕು ಲಕ್ಷದ…

4 hours ago

ಪ್ರಜ್ವಲ್ ವಿದೇಶಕ್ಕೆ ಹೋಗಲು ಕ್ಲಿಯರೆನ್ಸ್ ಕೊಟ್ಟವರು ಯಾರು: ಸಲೀಂ ಅಹ್ಮದ್

ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…

5 hours ago

ಸಿಎನ್ ಜಿ ಇಂಧನ ನಿರಂತರ ಪೂರೈಕೆಗೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ಯಶ್ ಪಾಲ್ ಸುವರ್ಣ ಮನವಿ

ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…

5 hours ago

ಲಕ್ಷ್ಮೀ ಹೆಬ್ಬಾಳಕರ್ ಮನೆಗೆ ಬಂದು ಕೃತಜ್ಞತೆ ಸಲ್ಲಿಸಿದ ನೇಹಾ ಹಿರೇಮಠ ತಂದೆ-ತಾಯಿ

ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…

5 hours ago